Employing children under the age of 14 and employing minors under the age of 18 in hazardous industries is a punishable offense.

shimoga | ಶಿವಮೊಗ್ಗ : ಪ್ರತಿಷ್ಠಿತ ಹೋಟೆಲ್ ಮಾಲೀಕರ ವಿರುದ್ಧ ಕೇಸ್ : ಕಾರಣವೇನು?

ಶಿವಮೊಗ್ಗ (shivamogga),ಮಾ. 13 : ನಿಯಮಾನುಸಾರ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು, ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್ ತಿಳಿಸಿದ್ದಾರೆ.

ಈ ಕುರಿತಂತೆ ಮಾರ್ಚ್ 13 ರಂದು ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಬಾಲ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರಿಗೆ 50,000 ರೂ. ವರೆಗೆ ದಂಡ ಹಾಗೂ 2 ವರ್ಷದವರೆಗಿನ ಸೆರೆಮನೆ ವಾಸದ ಶಿಕ್ಷೆ ಇದೆ. ತಪ್ಪಿತಸ್ಥ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ.

ಹಾಗೂ ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ದಂಡ ವಿಧಿಸಲಾಗುತ್ತದೆ. ಇಂತಹ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರು ಜಿಲ್ಲೆಯಲ್ಲಿ ಎಲ್ಲಿಯಾದರೂ ಕಂಡು ಬಂದರೆ ಮಕ್ಕಳ ಸಹಾಯವಾಣಿ 1098/112 ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬಹುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.  ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ, ಇತ್ತೀಚೆಗೆ ಶಿವಮೊಗ್ಗದ ಪ್ರತಿಷ್ಟಿತ ಹೋಟೆಲ್ ಹಾಗೂ ಶಿಕಾರಿಪುರ ತಾಲ್ಲೂಕಿನ ಆಟೋಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಬಾಲಕರನ್ನು ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಥಳ ಭೇಟಿ ಮಾಡಿ ರಕ್ಷಿಸಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಥಳ ಭೇಟಿ ಮಾಡಿ ಬಾಲಕರನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಮಕ್ಕಳ ಕಲ್ಯಾಣ ಸಮಿತಿ ಸಭೆಯಲ್ಲಿ ಮಕ್ಕಳು ಹಾಗೂ ಪೋಷಕರನ್ನು ವಿಚಾರಣೆ ಮಾಡಲಾಗಿ ಮಕ್ಕಳು ಬಾಲಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದುದನ್ನು ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಮಾಲೀಕರ ವಿರುದ್ದ ಬಾಲಕಾರ್ಮಿಕ/ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ 2016)ರಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕಾರ್ಮಿಕ ಇಲಾಖೆಗೆ ನಿರ್ದೇಶನ ನೀಡಿದ್ದು,

ಇದರನ್ವಯ ಇಲಾಖೆಯಿಂದ ಮಾಲೀಕರ ವಿರುದ್ದ ಪ್ರಕರಣ ದಾಖಲಾಗಿದ್ದು ಮಕ್ಕಳ ಪುನರ್ವಸತಿಗಾಗಿ ಮಾಲೀಕರಿಂದ ರೂ.20,000 ಕಾರ್ಪಸ್ ನಿಧಿಯನ್ನು ವಸೂಲಿ ಮಾಡಲಾಗಿರುತ್ತದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್ ತಿಳಿಸಿದ್ದಾರೆ.

Shivamogga, Mar. 13: According to the rules, employing children under the age of 14 for any work and employing juvenile workers under the age of 18 for work in hazardous industries is a punishable offense, said Tajuddin Khan, Chairman of the Child Welfare Committee.

They issued a notification in this regard on March 13. Employers who hire child laborers will be fined up to Rs. 50,000 and imprisoned for up to 2 years. A case will be registered against the guilty employers.

Based on a complaint received by the Child Helpline, officials from the Labor Department, District Child Protection Unit, and Child Helpline visited the spot and rescued the boys who were working at a prestigious hotel in Shivamogga and an automobile shop in Shikaripura taluk.

shimoga | ಪಡಿತರ ಚೀಟಿದಾರರಿಗೆ ನಗದು ವರ್ಗಾವಣೆ ಸ್ಥಗಿತ ಮಾರ್ಚ್ ತಿಂಗಳಲ್ಲಿ ಲಭ್ಯವಾಗಲಿರುವ ಅಕ್ಕಿ ಎಷ್ಟು? Shimoga | Cash transfer to ration card holders suspended how much rice will be available in March? Previous post shimoga | ಪಡಿತರ ಚೀಟಿದಾರರಿಗೆ ನಗದು ವರ್ಗಾವಣೆ ಸ್ಥಗಿತ, ಮಾರ್ಚ್ ತಿಂಗಳಲ್ಲಿ ಲಭ್ಯವಾಗಲಿರುವ ಅಕ್ಕಿ ಎಷ್ಟು?
Demand for a solution to the e-khata confusion in the Shivamogga Corporation! shimoga | ಶಿವಮೊಗ್ಗ ಪಾಲಿಕೆಯಲ್ಲಿ ಇ – ಖಾತಾ ಪರದಾಟ : ಜಿಲ್ಲಾಡಳಿತಕ್ಕೆ ಆಗ್ರಹವೇನು? Next post shimoga | ಶಿವಮೊಗ್ಗ: ಇ – ಖಾತಾ ಪರದಾಟ, ಜಿಲ್ಲಾಡಳಿತಕ್ಕೆ ಆಗ್ರಹವೇನು?