
shimoga | ಶಿವಮೊಗ್ಗ ಬಸ್ ನಿಲ್ದಾಣ ಸುತ್ತಮುತ್ತ ದಿಢೀರ್ ದಾಳಿ : ದಂಡ ವಸೂಲಿ!
ಶಿವಮೊಗ್ಗ (shivamogga), ಮಾ. 28: ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣ ಸುತ್ತಮುತ್ತ ಮಾ. 28 ರಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದವತಿಯಿಂದ ದಿಢೀರ್ ದಾಳಿ ನಡೆಸಿ, ಕೋಟ್ಪಾ ನಿಯಮ (ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ) ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಹಾಗೂ ಬಳಕೆ ಮಾಡುತ್ತಿದ್ದವರಿಗೆ ದಂಡ ವಿಧಿಸಿದ ಘಟನೆ ನಡೆದಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ದಾಳಿಯಲ್ಲಿ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು ಎಂದು ತಿಳಿಸಲಾಗಿದೆ.
ಒಟ್ಟಾರೆ ಕೋಟ್ಪಾ ಕಾಯ್ದೆ ಉಲ್ಲಂಘನೆ ಆರೋಪದಡಿ, 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಸ್ಥಳದಲ್ಲಿಯೇ 3000 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ದಾಳಿಯಲ್ಲಿ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು ಎಂದು ತಿಳಿಸಲಾಗಿದೆ.
ತಂಡದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್ ಜಿ ಕೆ, ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಮಹಾನಗರಪಾಲಿಕೆ ಆರೋಗ್ಯ ನಿರೀಕ್ಷಣಾಧಿಕಾರಿ ವಿಕಾಸ್ ಉಪಸ್ಥಿತರಿದ್ದರು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
Shivamogga, Mar. 28: On Mar. 28, the District Tobacco Control Cell conducted a surprise raid around the private bus stand in Shivamogga city and fined those who were selling and using tobacco products in violation of the COTPA Act.
A press release has been issued in this regard. It has been stated that personnel from the Health Department, muncipal Corporation and Police Department participated in the attack.