ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ!

ಸೂಕ್ತ ದಾಖಲೆಯಿಲ್ಲದೆ ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದ ಘಟನೆ, ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. 'ಒಟ್ಟಾರೆ 26 ಕ್ವಿಂಟಾಲ್ ತೂಕದ 100 ಬ್ಯಾಗ್ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 1.56 ಲಕ್ಷ ರೂ.ಗಳಾಗಿದೆ' ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ, ಮಾ. 31: ಸೂಕ್ತ ದಾಖಲೆಯಿಲ್ಲದೆ ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದ ಘಟನೆ, ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

‘ಒಟ್ಟಾರೆ 26 ಕ್ವಿಂಟಾಲ್ ತೂಕದ 100 ಬ್ಯಾಗ್ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 1.56 ಲಕ್ಷ ರೂ.ಗಳಾಗಿದೆ’ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

‘ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಸೂಕ್ತ ದಾಖಲೆಯಿಲ್ಲದೆ ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *