shimoga | ಶಿವಮೊಗ್ಗ : ಸ್ನೇಹಿತರ ನಡುವೆ ಕಲಹ – ಓರ್ವನ ಕೊಲೆಯಲ್ಲಿ ಅಂತ್ಯ!

Shikaripura: Teacher Commits Suicide vShikaripura: Teacher Commits S*uic*ide Inside School Room shikaripura news | ಶಿಕಾರಿಪುರ : ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆಗೆ ಶರಣಾದ ಶಿಕ್ಷಕ!

ಶಿವಮೊಗ್ಗ (shivamogga), ಏ. 2: ಸ್ನೇಹಿತರ ನಡುವೆ ಏರ್ಪಟ್ಟ ಕಲಹ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರಕೊಪ್ಪದಲ್ಲಿ ಏ. 2 ರಂದು ನಡೆದಿದೆ.

ದೇವರಾಜ್ (31) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೆಂಕಟೇಶ್ (36) ಆರೋಪಿಯಾಗಿದ್ದು, ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ವೆಂಕಟೇಶ್ ಹಾಗೂ ಕೊಲೆಗೀಡಾದ ದೇವರಾಜ್ ಸ್ನೇಹಿತರಾಗಿದ್ದಾರೆ. ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಇದು ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ಕೈ ಕೈ ಮಿಲಾವಣೆಯಾಗಿದೆ. 

ಈ ವೇಳೆ ವೆಂಕಟೇಶ್ ಗುದ್ದಲಿಯಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ದೇವರಾಜ್ ಅವರು ಸ್ಥಳದಲ್ಲಿಯೇ  ಮೃತಪಟ್ಟಿದ್ದಾರೆ‌ ಎಂದು ತಿಳಿದುಬಂದಿದೆ. ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.j

Shivamogga, Apr. 2: An incident that ended in the murder of a person following a dispute between friends took place on Apr. 2 in Tyavarakoppa, on the outskirts of Shivamogga city.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →