
shimoga | ಶಿವಮೊಗ್ಗ ಈದ್ಗಾ ಮೈದಾನ ವಿವಾದ ಕೊನೆಗೂ ಸುಖಾಂತ್ಯ!
ಶಿವಮೊಗ್ಗ (shivamogga), ಏ. 9: ಶಿವಮೊಗ್ಗ ನಗರದ ಸವಳಂಗ ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನ ವಿವಾದ, ಸೌಹಾರ್ದಯುತವಾಗಿ ಸುಖಾಂತ್ಯಗೊಂಡಿದೆ. ಈ ಹಿಂದಿನಂತೆ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ.
ಈ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಏ. 9 ರ ಬೆಳಿಗ್ಗೆ ಮಾಧ್ಯಮ ಸಂದೇಶ ಬಿಡುಗಡೆ ಮಾಡಿದ್ದಾರೆ. ಡಿಸಿ ಕಚೇರಿ ಮುಂಭಾಗದ ಜಾಗದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಲಾಗಿದೆ. ವಿಚಾರ ಇತ್ಯರ್ಥಕ್ಕೆ ಎಲ್ಲರೂ ಒಪ್ಪಿಕೊಂಡಿದ್ದಾರೆ. ಸಿಸಿ ಕ್ಯಾಮರಾಗಳ ಅಳವಡಿಕೆ, ಲೈಟ್ ಗಳ ಅಳವಡಿಕೆ ಹಾಗೂ ಸ್ವಚ್ಛತೆಗೆ ಬೇಡಿಕೆ ವ್ಯಕ್ತವಾಗಿದೆ. ಇದನ್ನು ಆಡಳಿತ ವ್ಯವಸ್ಥೆಯಿಂದ ಕೈಗೊಳ್ಳಲು ಸಮ್ಮತಿಸಲಾಗಿದೆ ಎಂದು ಹೇಳಿದ್ದಾರೆ.
ನಾಳೆ (ಏ. 10) ಬೆಳಿಗ್ಗೆ 10 ಗಂಟೆಯಿಂದ ಈ ಹಿಂದೆ ಬಳಸಲಾಗುತ್ತಿದ್ದಂತೆ, ಜಾಗವನ್ನು ಪಾರ್ಕಿಂಗ್ ಗಾಗಿ ಬಳಕೆ ಮಾಡಿಕೊಳ್ಳಲು ಅನುಮತಿಸಲಾಗಿದೆ. ಈ ನಿಟ್ಟಿನಲ್ಲಿ ಸಹಕರಿಸಿದ ಮತ್ತು ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲು ಸಹಾಯ ಮಾಡಿದ ಸಾರ್ವಜನಿಕರು, ಸಮುದಾಯಗಳ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಎಸ್ಪಿ ಅವರು ತಿಳಿಸಿದ್ದಾರೆ.
Shivamogga, Apr. 3: The dispute over the Eidgah ground in front of the Deputy Commissioner’s office on Savalanga Road in Shivamogga city has come to an amicable and happy end. Parking is being allowed as before.
In this regard, District Protection Officer G K Mithun Kumar issued a press release on the morning of April 9. He informed that the issue of the land in front of the DC office has been resolved amicably.