ಶಿವಮೊಗ್ಗ ಹೊರವಲಯ ರಾಗಿಗುಡ್ಡದಲ್ಲಿ ಬೆಂಕಿ!

ಶಿವಮೊಗ್ಗ, ಎ. 6: ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ಅಗ್ನಿಯ ಕೆನ್ನಾಲಿಗೆ ವ್ಯಾಪಿಸುವುದನ್ನು ನಿಯಂತ್ರಿಸಿದೆ. ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆಂಬುವುದು ಸ್ಪಷ್ಟವಾಗಿಲ್ಲ. ತೀವ್ರ ಸ್ವರೂಪದ ಬಿಸಿಲಿನಿಂದ ಗುಡ್ಡದಲ್ಲಿ ಕುರುಚಲು ಗಿಡಗಂಟೆಗಳು, ಹಸಿರು ಹುಲ್ಲು ಒಣಗಿದೆ. ಪ್ರಸ್ತುತ ಬೇಸಿಗೆ ವೇಳೆ ಕಾಡ್ಗಿಚ್ಚಿನಿಂದ ರಾಗಿಗುಡ್ಡ ಉಳಿಸುವ ನಿಟ್ಟಿನಲ್ಲಿ, ಆಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತಿರುವ ಏಕೈಕ ಗುಡ್ಡ ರಾಗಿಗುಡ್ಡವಾಗಿದೆ. ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನವಾಗಿದೆ. ಆದರೆ ವಿವಿಧ ಅಭಿವೃದ್ದಿ ಕಾಮಗಾರಿ, ಕಟ್ಟಡಗಳ ನಿರ್ಮಾಣದಿಂದ ಗುಡ್ಡ ಕಣ್ಮರೆಯಾಗುತ್ತಿದೆ. ಇದೀಗ ಕಾಳ್ಗಿಚ್ಚಿನಿಂದ ಅಳಿದುಳಿದ ಪ್ರಕೃತಿ ಸಂಪತ್ತು ವಿನಾಶವಾಗಲಾರಂಭಿಸಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಶಿವಮೊಗ್ಗ, ಎ. 6: ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ಅಗ್ನಿಯ ಕೆನ್ನಾಲಿಗೆ ವ್ಯಾಪಿಸುವುದನ್ನು ನಿಯಂತ್ರಿಸಿದೆ.

ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆಂಬುವುದು ಸ್ಪಷ್ಟವಾಗಿಲ್ಲ. ತೀವ್ರ ಸ್ವರೂಪದ ಬಿಸಿಲಿನಿಂದ ಗುಡ್ಡದಲ್ಲಿ ಕುರುಚಲು ಗಿಡಗಂಟೆಗಳು, ಹಸಿರು ಹುಲ್ಲು ಒಣಗಿದೆ. ಪ್ರಸ್ತುತ ಬೇಸಿಗೆ ವೇಳೆ ಕಾಳ್ಗಿಚ್ಚಿನಿಂದ ರಾಗಿಗುಡ್ಡ ಉಳಿಸುವ ನಿಟ್ಟಿನಲ್ಲಿ, ಆಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತಿರುವ ಏಕೈಕ ಗುಡ್ಡ ರಾಗಿಗುಡ್ಡವಾಗಿದೆ. ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನವಾಗಿದೆ. ಆದರೆ ವಿವಿಧ ಅಭಿವೃದ್ದಿ ಕಾಮಗಾರಿ, ಕಟ್ಟಡಗಳ ನಿರ್ಮಾಣದಿಂದ ಗುಡ್ಡ ಕಣ್ಮರೆಯಾಗುತ್ತಿದೆ. ಇದೀಗ ಕಾಳ್ಗಿಚ್ಚಿನಿಂದ ಅಳಿದುಳಿದ ಪ್ರಕೃತಿ ಸಂಪತ್ತು ವಿನಾಶವಾಗಲಾರಂಭಿಸಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *