ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ!

ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ.

ಭದ್ರಾವತಿ, ಎ. 7: ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ.

ಭದ್ರಾವತಿ ಸೀಗೆಬಾಗಿ ನಿವಾಸಿ ರೋಷನ್ (27), ವೀರಾಪುರದ ಮೊಹಮ್ಮದ್ ಇಬ್ರಾಹಿಂ ಮೀರ್ ಯಾನೆ ಟಕ್ಕರ್ (24) ಹಾಗೂ ಭದ್ರಾ ಕಾಲೋನಿ ನಿವಾಸಿ ಮಂಜುನಾಥ್ ಯಾನೆ ಕ್ಯಾತೆ (27) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳಿಂದ 7 ಸಾವಿರ ರೂ. ಮೌಲ್ಯದ  195 ಗ್ರಾಂ ತೂಕದ ಒಣ ಗಾಂಜಾ, 690 ನಗದು, ಕೃತ್ಯಕ್ಕೆ ಬಳಸಿದ್ದ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಭದ್ರಾವತಿ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರಾದ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಹಳೇನಗರ ಪೊಲೀಸ್ ಠಾಣೆ ಪಿಎಸ್ಐ ಶರಣಪ್ಪ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *