Shivamogga | 20 years rigorous imprisonment: Rs. 75 thousand fine! ಶಿವಮೊಗ್ಗ | 20 ವರ್ಷ ಕಠಿಣ ಜೈಲು ಶಿಕ್ಷೆ : 75 ಸಾವಿರ ರೂ. ದಂಡ!

shimoga | ಶಿವಮೊಗ್ಗ | ಮಾರಣಾಂತಿಕ ಹಲ್ಲೆ ಪ್ರಕರಣ : 2 ವರ್ಷ ಜೈಲು ಶಿಕ್ಷೆ!

ಶಿವಮೊಗ್ಗ (shivamogga), ಜೂ. 18: ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೋರ್ವನಿಗೆ 2 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗದ ವಿದ್ಯಾನಗರ ಬಡಾವಣೆ ನಿವಾಸಿ ರಾಘವೇಂದ್ರ (38) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ಕೂಡ ನ್ಯಾಯಾಲಯ ವಿಧಿಸಿದೆ.

ನ್ಯಾಯಾಧೀಶರಾದ ಯಶವಂತ್ ಕುಮಾರ್ ರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶಾಂತರಾಜ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ಶಿಕ್ಷೆಗೊಳಗಾದ ರಾಘವೇಂದ್ರನು ಪತ್ನಿಗೆ ವಿಚ್ಛೇದನ ನೀಡಿದ್ದ. ಪತಿ – ಪತ್ನಿ ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. 2-6-2027 ರಂದು ಬಸವನಗುಡಿಯಲ್ಲಿ ವಾಸವಾಗಿದ್ದ ಪತ್ನಿ ಮನೆಗೆ ತೆರಳಿ ಗಲಾಟೆ ಮಾಡಿದ್ದ.

ಈ ವೇಳೆ ಪತ್ನಿ ಹಾಗೂ ಅತ್ತೆಯ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದ. ಈ ಕುರಿತಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಜಯನಗರ ಪೊಲೀಸ್ ಠಾಣೆ ( jayanagara polic station ) ತನಿಖಾಧಿಕಾರಿಯಾದ, ಇಮ್ರಾನ್ ಬೇಗ್ (ಪ್ರಸ್ತುತ ತೀರ್ಥಹಳ್ಳಿ ಠಾಣೆಯಲ್ಲಿ ಇನ್ಸ್’ಪೆಕ್ಟರ್) ರವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.

Shivamogga, June 18: The 3rd Additional District and Sessions Court of Shivamogga has sentenced a person to 2 years in simple imprisonment in connection with a fatal assault case.

shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 18 ರ ತರಕಾರಿ ಬೆಲೆಗಳ ವಿವರ
Power outage in various parts of Shivamogga city - taluk on September 27 ಶಿವಮೊಗ್ಗ ನಗರ - ತಾಲೂಕಿನ ವಿವಿಧೆಡೆ ಸೆಪ್ಟೆಂಬರ್ 27 ರಂದು ವಿದ್ಯುತ್ ವ್ಯತ್ಯಯ Next post shimoga | power cut news | ಶಿವಮೊಗ್ಗ : ಜೂ. 20 ರಂದು ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ!