
shimoga | ಶಿವಮೊಗ್ಗ : ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರಿಂದ ರಕ್ತದಾನ
ಶಿವಮೊಗ್ಗ (shivamogga), ಜೂ. 23: ಶಿವಮೊಗ್ಗ ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂ. 23 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಆಶಾ ಜ್ಯೋತಿ ರಕ್ತ ಕೇಂದ್ರದ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿತ್ತು ಎಂದು ಪೊಲೀಸ್ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಸದರಿ ಶಿಬಿರದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ರಕ್ತದಾನ ಮಾಡಿದ್ದಾರೆ.
ಶಿಬಿರದಲ್ಲಿ ಒಟ್ಟಾರೆ 46 ಜನರು ರಕ್ತದಾನ ಮಾಡಿದ್ದಾರೆ. ರಕ್ತದಾನ ಶ್ರೇಷ್ಠ ದಾನವಾಗಿದೆ. ರಕ್ತದಾನ ಮಾಡಿ ಜೀವ ಉಳಿಸುವ ಕಾರ್ಯ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
Shivamogga, Jun. 23: A voluntary blood donation camp was organized at the rural police station in Shivamogga city on June 23. The police department, in a statement released on Monday, said that the camp was organized in collaboration with the district police department and the Asha Jyoti Blood Center.
Officers and staff of the rural police station, women’s police station, and the public donated blood at the camp. A total of 46 people donated blood in the camp. Blood donation is a great act of charity. The district police department has asked people to donate blood and save lives.