shimoga | lokayukta raid | ಶಿವಮೊಗ್ಗ : ಏಕಕಾಲಕ್ಕೆ ಲೋಕಾಯುಕ್ತ ದಾಳಿ – ದಾಖಲೆಗಳ ತಪಾಸಣೆ!

shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ! Shivamogga: Lokayukta police raid officer's house!

ಶಿವಮೊಗ್ಗ (shivamogga), ಜೂ. 23: ಕೆಳದಿ ಶಿವಪ್ಪನಾಯಕ ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದ ಸಾವಯವ ಕೃಷಿ ವಿಭಾಗದ ಸಹ ಸಂಶೋಧನಾ ನಿರ್ದೇಶಕ ಡಾ ಎಸ್ ಪ್ರದೀಪ್ ರವರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ತಂಡ ಏಕಕಾಲಕ್ಕೆ ದಾಳಿ ನಡೆಸಿದ ಘಟನೆ ಜೂ. 24 ರ ಬೆಳಿಗ್ಗೆ ನಡೆದಿದೆ.

ಪ್ರದೀಪ್ ಅವರಿಗೆ ಸೇರಿದ ಶಿವಮೊಗ್ಗದ ಪ್ರಿಯದರ್ಶಿನಿ ಲೇಔಟ್ ನಲ್ಲಿರುವ ನಿವಾಸ, ಶಿಕಾರಿಪುರದ ಭದ್ರಾಪುರ ಹಾಗೂ ಹೊಸನಗರ ತಾಲೂಕಿನಲ್ಲಿರುವ ತೋಟದ ಮನೆ ಮತ್ತು ಅವರು ಕಾರ್ಯನಿರ್ವಹಿಸುತ್ತಿದ್ದ ಕಚೇರಿ ಮೇಲೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಮೂರ್ನಾಲ್ಕು ಪ್ರತ್ಯೇಕ ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಆದಾಯಕ್ಕೂ ಮೀರಿದ ಸಂಪತ್ತು ಗಳಿಕೆಯ ಆರೋಪದ ಮೇರೆಗೆ ದಾಳಿ ನಡೆದಿದೆ ಎಂದು ಹೇಳಲಾಗಿದ್ದು, ಲೋಕಾಯುಕ್ತ ತಂಡಗಳು ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿವೆ ಎಂದು ತಿಳಿದುಬಂದಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.

Shivamogga, June 23: A Lokayukta team simultaneously raided the residence and office of Dr S Pradeep, Associate Research Director of the Department of Organic Agriculture at Keladi Shivappanayaka Agriculture and Horticulture University, on the morning of June 24.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →