dharmasthala case | Dharmasthala case : Will not yield to any pressure - legal action - CM ಧರ್ಮಸ್ಥಳ ಪ್ರಕರಣ : ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

dharmasthala case | ಧರ್ಮಸ್ಥಳ‌ ಪ್ರಕರಣ : ‘ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ- ಕಾನೂನು ರೀತಿ ಕ್ರಮ’ – ಸಿಎಂ

ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು,  ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ನಗರಪ್ರದೇಶದ ಮತದಾರರಲ್ಲಿ ಕಾಂಗ್ರೆಸ್ ಪರವಾದ ಒಲವು ಕಡಿಮೆ ಆಗುತ್ತಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಳಿನ ಕಾರ್ಯಕ್ರಮ ಯಾರದೇ ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಅದು ಅಭಿವೃದ್ಧಿಯ ಕಾರ್ಯಕ್ರಮ ಎಂದರು.

ಅಧಿಸೂಚನೆ ಹೊರಡಿಸಿಲ್ಲ : ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಕೃಷ್ಣಾನದಿ  ನೀರು ಹಂಚಿಕೆ ಬಗ್ಗೆ ಕೇಂದ್ರ ಇದುವರೆಗೂ ಅಧಿಸೂಚನೆಯನ್ನು ಹೊರಡಿಸಿಲ್ಲದಿರುವುದು ರಾಜ್ಯದ ಮೇಲೆ ಒತ್ತಡ ಹೇರಿದಂತಾಗಿದೆಯೇ ಬಗ್ಗೆ ಪ್ರತಿಕ್ರಿಯೆ ನೀಡಿ, ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ.

ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ  ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದರು.

ಸಂಪುಟದಲ್ಲಿ ತೀರ್ಮಾನ : ಆರ್ ಸಿ ಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗದ ವರದಿಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ,  . ಮುಂದಿನ ಸಚಿವ ಸಂಪುಟದಲ್ಲಿ ತನಿಖಾ ವರದಿಯ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದರು.

ಒತ್ತಡಕ್ಕೆ ಮಣಿಯುವುದಿಲ್ಲ : ಧರ್ಮಸ್ಥಳದ #dharmasthala, ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ತನಿಖೆ ನಡೆಸಲು ಸೂಚನೆ : ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಹುಸಿ ಬಾಂಬ್ ಕರೆಯಿರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು. ಸುಳ್ಳು ಹೇಳಿ ಅಪಪ್ರಚಾರ , ಪ್ರಚೋದನೆಗೊಳಿಸುವ ಕೃತ್ಯಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ ಎಂದರು.

ಬಿಟ್ಟುಕೊಡಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದರು.

Mysore, July 18: CM Siddaramaiah spoke to reporters in Mysore on July 18. Responding to a retired judge’s demand for an SIT investigation into the Dharmasthala case, the government said it will take legal action. The person involved in the case came forward and gave a statement to the police after ten years. A decision will be taken regarding the SIT investigation after discussing it with the police department. He said that the government will not bow to any pressure regarding the investigation of the case and will take legal action.

What is the free e-Pauti movement? What did Shivamogga Tahsildar Rajiv say? ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು? Previous post Shimoga Tahsildar | ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?
Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ! Next post shimoga | power cut | ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!