
shimoga rain | ಮಲೆನಾಡಲ್ಲಿ ಮುಂಗಾರು ಮಳೆ : ತುಂಗ, ಭದ್ರಾ, ಲಿಂಗನಮಕ್ಕಿ ಡ್ಯಾಂಗೆ ಹೆಚ್ಚಿದ ಒಳಹರಿವು!
ಶಿವಮೊಗ್ಗ (shivamogga), ಜು. 24: ಮಲೆನಾಡಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದೆ. ಇದರಿಂದ ಪ್ರಮುಖ ನದಿಗಳ ನೀರಿನ ಹರಿವಿನಲ್ಲಿ ಏರಿಕೆಯಾಗಿದೆ. ಹಾಗೆಯೇ ತುಂಗ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಹೆಚ್ಚಳ ಕಂಡುಬಂದಿದೆ.
ಜು. 25 ರ ಬೆಳಿಗ್ಗೆಯ ಮಾಹಿತಿಯಂತೆ ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ ಒಳಹರಿವು 40,415 ಕ್ಯೂಸೆಕ್ ಗೆ ಏರಿಕೆಯಾಗಿದೆ. 4864 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1806. 40 (ಗರಿಷ್ಠ ಮಟ್ಟ : 1819) ಅಡಿಯಿದೆ.
ಭದ್ರಾ ಜಲಾಶಯಕ್ಕೆ 20,407 ಕ್ಯೂಸೆಕ್ ಒಳಹರಿವಿದೆ. 8914 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 180. 6 (ಗರಿಷ್ಠ ಮಟ್ಟ : 186) ಅಡಿಯಿದೆ. ಡ್ಯಾಂ ಗರಿಷ್ಠ ಮಟ್ಟ ತಲುಪಲು ಇನ್ನೂ ಕೇವಲ 6 ಅಡಿ ನೀರು ಹರಿದುಬರಬೇಕಾಗಿದೆ.
ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಈಗಾಗಲೇ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪುದುಕ್ಕೂ ಮುನ್ನವೇ, ಡ್ಯಾಂನಿಂದ ನದಿಗೆ ಹಾಗೂ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಕಳೆದ ವರ್ಷದ ಇದೇ ದಿನದಂದು ಡ್ಯಾಂನಲ್ಲಿ 171 ಅಡಿ ನೀರು ಸಂಗ್ರಹವಾಗಿತ್ತು.
ಉಳಿದಂತೆ ತುಂಗಾ ಜಲಾಶಯದ ಒಳಹರಿವು 33,701 ಕ್ಯೂಸೆಕ್ ಗೆ ಏರಿಕೆಯಾಗಿದೆ. 35,565 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ.
ಮಳೆ ವಿವರ : ಜಿಲ್ಲೆಯಾದ್ಯಂತ ಮುಂಗಾರು ಮಳೆ ಮುಂದುವರಿದಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಧಾರಾಕಾರ ವರ್ಷಧಾರೆಯಾಗುತ್ತಿದೆ. ಜು. 25 ರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ.
ಮಾಣಿಯಲ್ಲಿ 132 ಮಿಲಿ ಮೀಟರ್ (ಮಿ.ಮೀ), ಯಡೂರು 92 ಮಿ.ಮೀ., ಹುಲಿಕಲ್ 160 ಮಿ.ಮೀ., ಮಾಸ್ತಿಕಟ್ಟೆ 138 ಮಿ.ಮೀ., ಚಕ್ರಾ 110 ಮಿ.ಮೀ. ಹಾಗೂ ಸಾವೇಹಕ್ಲುವಿನಲ್ಲಿ 135 ಮಿ.ಮೀ. ಮಳೆಯಾಗಿದೆ.
Shivamogga, July 24: Monsoon rains have intensified in the hilly areas. This has led to an increase in the water flow of major rivers. There has also been a significant increase in the inflow of Tunga, Bhadra and Linganamakki reservoirs.
Mani received 132 millimeters (mm), Yadoor 92 mm, Hulikal 160 mm, Mastikatte 138 mm, Chakra 110 mm and Savehaklu 135 mm. Rainfall.