ಮುಂಗಾರು ಮಳೆ : ಜುಲೈ 26 ರಂದು ಶಿವಮೊಗ್ಗ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ!

Heavy rains: Holiday declared for schools and colleges in Shivamogga taluk on August 29! ಭಾರೀ ಮಳೆ : ಆಗಸ್ಟ್ 29 ರಂದು ಶಿವಮೊಗ್ಗ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!

ಶಿವಮೊಗ್ಗ, ಜು.25: ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜುಲೈ 26 ರ ಶನಿವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತಂತೆ ಅವರು ಇಂದು ಸಂಜೆ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವದರಿಂದ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ, 

ಮುಂಜಾಗ್ರತಾ ದೃಷ್ಟಿಯಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. 

ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →