
shimoga district rain | ಮುಂಗಾರು ಮಳೆ : ಲಿಂಗನಮಕ್ಕಿ ಡ್ಯಾಂಗೆ ಭಾರೀ ಪ್ರಮಾಣದ ಒಳಹರಿವು!
ಶಿವಮೊಗ್ಗ (shivamogga), ಜು. 26: ಮಲೆನಾಡಿನಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಅಬ್ಬರ ಜೋರಾಗಿದೆ. ಇದರಿಂದ ಪ್ರಮುಖ ನದಿಗಳ ಹರಿವಿನಲ್ಲಿ ಗಣನೀಯ ಏರಿಕೆಯಾಗಿದ್ದು, ಜಲಾಶಯಗಳ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದೆ.
ಜು. 26 ರ ಬೆಳಿಗ್ಗೆ 8 ಗಂಟೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂನ ಒಳಹರಿವು 67,856 ಕ್ಯೂಸೆಕ್ ಗೆ ಏರಿಕೆಯಾಗಿದೆ. 3335 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಪ್ರಸ್ತುತ ಡ್ಯಾಂನ ನೀರಿನ ಮಟ್ಟ 1808.35 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನಂದು ಡ್ಯಾಂ ನೀರಿನ ಮಟ್ಟ 1804. 80 ಅಡಿ ನೀರು ಸಂಗ್ರಹವಾಗಿತ್ತು. ಪ್ರಸ್ತುತ ವರ್ಷ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಕಳೆದ ವರ್ಷಕ್ಕಿಂತ ಹೆಚ್ಚಿನ ನೀರು ಸಂಗ್ರಹವಾಗಿದೆ.
ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ ಭದ್ರಾ ಡ್ಯಾಂ ಒಳಹರಿವು 21,568 ಕ್ಯೂಸೆಕ್ ಗೆ ಏರಿಕೆಯಾಗಿದ್ದು, ಒಳಹರಿವಿನಷ್ಟೆ ನೀರನ್ನು ಹೊರ ಹರಿಸಲಾಗುತ್ತಿದೆ. ಡ್ಯಾಂ ನೀರಿನ ಮಟ್ಟ 180. 6 (ಗರಿಷ್ಠ ಮಟ್ಟ : 186) ಅಡಿಯಿದೆ.
ಉಳಿದಂತೆ ತುಂಗಾ ಡ್ಯಾಂನ ಒಳಹರಿವಿನಲ್ಲಿಯೂ ಏರಿಕೆ ಕಂಡುಬಂದಿದ್ದು, 49,139 ಕ್ಯೂಸೆಕ್ ಇದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ 49,863 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ.
ಮಳೆ ವಿವರ : ಜು. 26 ರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಬಿದ್ದ ಮಳೆ ವಿವರ ಈ ಮುಂದಿನಂತಿದೆ.
ಮಾಣಿಯಲ್ಲಿ 237 ಮಿಲಿ ಮೀಟರ್ (ಮಿ.ಮೀ.), ಯಡೂರು 202 ಮಿ.ಮೀ., ಹುಲಿಕಲ್ 209 ಮಿ.ಮೀ., ಮಾಸ್ತಿಕಟ್ಟೆ 214 ಮಿ.ಮೀ., ಚಕ್ರಾ 210 ಮಿ.ಮೀ. ಹಾಗೂ ಸಾವೇಹಕ್ಲುವಿನಲ್ಲಿ 180 ಮಿ.ಮೀ. ಮಳೆಯಾಗಿದೆ.
Shivamogga, July 26: Monsoon rains have intensified further in the hilly areas. The Western Ghats are witnessing a heavy downpour. This has led to a significant increase in the flow of major rivers and an increase in the inflow of reservoirs.
Rainfall details: The rainfall details in the Western Ghats area of the district in the last 24 hours ending at 8 am on July 26 are as follows. Mani received 237 millimeters (mm), Yadur 202 mm, Hulikal 209 mm, Mastikatte 214 mm, Chakra 210 mm and Savehaklu 180 mm. Rainfall.