shimoga | ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ!

Bhadravati: A love dispute that turned into a disaster – ended in the murder of two people! ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!

ಶಿವಮೊಗ್ಗ (shivamogga), ಜು. 27: ಮನೆಯಲ್ಲಿಯೇ ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ತಡರಾತ್ರಿ ನಡೆದಿದೆ.

ಮಣಿಕಂಠ (38) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಕೊಲೆಗೀಡಾದ ಮಣಿಕಂಠ ಮನೆಯಲ್ಲಿ ಓರ್ವನೇ ವಾಸವಾಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ಅವರು ಭೇಟಿಯಿತ್ತು ಪರಿಶೀಲಿಸಿದ್ದಾರೆ.

ಕೊಲೆಗೆ ಕಾರಣವೇನು? ದುಷ್ಕರ್ಮಿಗಳು ಯಾರು? ಎಂಬಿತ್ಯಾದಿ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Shivamogga, July 27: A young man was brutally murdered by throwing a stone at his head at home in an incident that took place late last night in Tunganagara, upper part of Shivamogga city.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →