
shimoga protest news | ಶಿವಮೊಗ್ಗ : ಗ್ರಾಪಂ ನೌಕರರ ಸಂಘದಿಂದ ಜಿಪಂ ಕಚೇರಿ ಎದುರು ಪ್ರತಿಭಟನೆ – ಕಾರಣವೇನು?
ಶಿವಮೊಗ್ಗ (shivamogga), ಜು. 28: ಗ್ರಾಮ ಪಂಚಾಯ್ತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಜು. 28 ರಂದು ಶಿವಮೊಗ್ಗ ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಗ್ರಾಮ ಪಂಚಾಯ್ತಿ ನೌಕರರ ಸಂಘಟನೆಯು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಅರ್ಪಿಸಿತು.
ಗ್ರಾಪಂ ನೌಕರರ 23 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಇಲ್ಲಿಯವರೆಗೂ ಹಲವು ಬೇಡಿಕೆಗಳು ಕಾರ್ಯರೂಪಕ್ಕೆ ಬಂದಿಲ್ಲ. ಈ ಕಾರಣದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಘಟನೆ ತಿಳಿಸಿದೆ.
ಬೇಡಿಕೆಗಳೇನು? : ಅನ್ಯ ಇಲಾಖೆ ಸಿಬ್ಬಂದಿಗಳನ್ನು ಗ್ರಾಪಂ ನೌಕರರೆಂದು ಪರಿಗಣಿಸಬಾರದು. ಸಿಬ್ಬಂದಿಗಳಿಗೆ 31 ಸಾವಿರ ರೂ. ಮಾಸಿಕ ವೇತನ ನಿಗದಿಯಾಗಬೇಕು. ಸಿಬ್ಬಂದಿಗಳು ಮರಣ ಹೊಂದಿದ ವೇಳೆ, ಕುಟುಂಬಕ್ಕೆ ಮಾಸಿಕ 6 ಸಾವಿರ ರೂ. ಪಿಂಚಣಿ ನೀಡಬೇಕು.
ಗ್ರಾಪಂ ಸ್ವಚ್ಛ ವಾಹಿನಿ ನೌಕರರ ಸೇವೆ ಖಾಯಂಗೊಳಿಸಬೇಕು. ಪ್ರಸ್ತುತವಿರುವ ಒಡಂಬಡಿಕೆ, ವಾರ್ಷಿಕ ನೊಂದಣಿ ವ್ಯವಸ್ಥೆ ರದ್ದುಗೊಳಿಸಬೇಕು. 15 ನೇ ಹಣಕಾಸಿನಡಿ ವೇತನ ನೀಡಬೇಕು. ಮಾಸಿಕ 15 ಸಾವಿರ ರೂ. ವೇತನ ನಿಗದಿಗೊಳಿಸಬೇಕು.
ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್ ಗಳು, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಖಾಯಂ ನೌಕರರೆಂದು ಘೋಷಿಸಬೇಕು. ಗ್ರಾಪಂ ನೌಕರರ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು. ಗ್ರಾಪಂಗಳಲ್ಲಿ ಲೆಕ್ಕ ಸಹಾಯಕ ಹುದ್ದೆ ಸೃಜಿಸಬೇಕು.
ಸೇವಾ ಹಿರಿತನ ಪರಿಗಣಿಸಿ ವೇತನ ಏರಿಕೆ ಮಾಡಬೇಕು. ನೌಕರರ ಆಸ್ಪತ್ರೆ ವೆಚ್ಚ ಭರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಘಟನೆಯು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
Shimoga, Ju 28: Demanding fulfillment of various demands of Gram Panchayat employees, Ju. On 28th, the Gram Panchayat Employees’ Organization protested in front of the Zilla Panchayat office in Shimoga city and submitted a petition to the state government.