
bhadravati | holehonnuru news | ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಮಹಿಳೆ ಬಂಧನ!’
ಶಿವಮೊಗ್ಗ (shivamogga), ಜು. 30: ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ ಪೊಲೀಸರು ಮಹಿಳೆಯೋರ್ವರನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ಜು. 29 ರಂದು ನಡೆದಿದೆ.
ಲಕ್ಷ್ಮೀ ಬಂಧಿತ ಆಪಾದಿತೆ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕಳವು ಮಾಡಿದ್ದ 4. 57 ಲಕ್ಷ ರೂ. ಮೌಲ್ಯದ 65 ಗ್ರಾಂ 490 ಮಿಲಿ ತೂಕದ ಬಂಗಾರದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಜು. 30 ರಂದು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಡಿವೈಎಸ್ಪಿ ನಾಗರಾಜ್ ಮೇಲ್ವಿಚಾರಣೆಯಲ್ಲಿ ಹೊಳೆಹೊನ್ನೂರು ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಶಿವಪ್ರಸಾದ್ ಎಂ, ಸಬ್ ಇನ್ಸ್’ಪೆಕ್ಟರ್ ಗಳಾದ ರಮೇಶ್, ಸಿಬ್ಬಂದಿಗಳಾದ ಅಣ್ಣಪ್ಪ, ಪ್ರಸನ್ನ, ವಿಶ್ವನಾಥ್, ಪ್ರಕಾಶ್ ನಾಯ್ಕ್, ಮಂಜುನಾಥ್, ಶಿವಮ್ಮರವರು ಆಪಾದಿತೆಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.
ಪ್ರಕರಣದ ಹಿನ್ನೆಲೆ : ಭದ್ರಾವತಿ ತಾಲೂಕು ಡಿ ಬಿ ಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಮ್ಮ (90) ಎಂಬ ವೃದ್ದೆಯ ಮನೆಯಲ್ಲಿ, 18-6-2025 ರಂದು 203 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Shimoga, Ju 30: In connection with the alleged theft of gold jewelery from a house, Bhadravati taluk Holehonur station police arrested a woman and recovered lakhs of rupees. Valuable gold jewelery seized incident Ju. Happened on 29th.