Shimoga Palike | Municipality area revision: Speed in Tumkur - snail pace in Shivamogga! | Continued negligence of public representatives - officials..!! ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ತುಮಕೂರಲ್ಲಿ ವೇಗ - ಶಿವಮೊಗ್ಗದಲ್ಲಿ ಆಮೆವೇಗ! | ಮುಂದುವರಿದ ಜನಪ್ರತಿನಿಧಿಗಳು - ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ..!!

shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಮತ್ತೆ ವಿಳಂಬ : ಗಮನಿಸುವರೆ ಸಿಎಂ, ಸಚಿವರು?

ಶಿವಮೊಗ್ಗ (shivamogga), ಆಗಸ್ಟ್ 8: ಬರೋಬ್ಬರಿ 30 ವರ್ಷಗಳ ನಂತರ, ಶಿವಮೊಗ್ಗ ನಗರಾಡಳಿತ ವ್ಯಾಪ್ತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಆದರೆ ಪ್ರಕ್ರಿಯೇ ಆರಂಭಗೊಂಡು ವರ್ಷವೇ ಉರುಳಿದರೂ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಆಮೆ ವೇಗದಲ್ಲಿ ಸಾಗುತ್ತಿದೆ. ಸದ್ಯ ಅಕ್ಷರಶಃ ನೆನೆಗುದಿಗೆ ಬಿದ್ದಿದೆ!

ಸ್ವತಃ ರಾಜ್ಯ ಸರ್ಕಾರವೇ ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಗೆ ಆಸಕ್ತಿವಹಿಸಿ ಆದೇಶ ಹೊರಡಿಸಿದ್ದರೂ, ಇಲ್ಲಿಯವರೆಗೂ ಸ್ಥಳಿಯಾಡಳಿತ ಮಾತ್ರ ಅಂತಿಮ ವರದಿ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸುವ ಕಾರ್ಯ ಮಾಡಿಲ್ಲ. ಇಡೀ ಪ್ರಕ್ರಿಯೆ ‘ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ..!’ ಎಂಬ ಮಾತಿನಂತಾಗಿದೆ!!

ಸ್ಥಿತಿಗತಿಯೇನು? : ಸರ್ಕಾರದ ಸೂಚನೆಯಂತೆ ಈ ಹಿಂದಿನ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಅಧಿಕಾರಿಗಳ ಪ್ರತ್ಯೇಕ ತಂಡ ರಚನೆ ಮಾಡಿ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬಹುದಾದ ಪ್ರದೇಶಗಳ ಸರ್ವೇ ನಡೆಸಿದ್ದರು. ವರದಿ ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು.

ಪಾಲಿಕೆ ಆಡಳಿತ ಸಿದ್ದಪಡಿಸಿರುವ ವರದಿಯಲ್ಲಿ, 9 ಗ್ರಾಮ ಪಂಚಾಯ್ತಿಯ 19 ಹಳ್ಳಿಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಿತ್ತು. ಸದರಿ ವರದಿ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೇ ತಿಂಗಳಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದರು.

ಗ್ರಾಮ ಪಂಚಾಯ್ತಿ ಆಡಳಿತಗಳು, ಜನಪ್ರತಿನಿಧಿಗಳು, ನಾಗರೀಕರ ಅಹವಾಲು ಆಲಿಸಿ ಕಾಲಮಿತಿಯೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಈ ನಡುವೆ ನಗರಕ್ಕೆ ಹೊಂದಿಕೊಂಡಂತಿರುವ ಕೆಲ ವಸತಿ ಬಡಾವಣೆಗಳನ್ನು, ಪಾಲಿಕೆ ಸಿದ್ದಪಡಿಸಿದ್ದ ವರದಿಯಲ್ಲಿ ಕೈಬಿಡಲಾಗಿತ್ತು. ಇದು ಬಡಾವಣೆಗಳ ನಾಗರೀಕರ ಅಸಮಾಧಾನಕ್ಕೆ ಕಾರಣವಾಗಿತ್ತು.

ಗ್ರಾಮ ಪಂಚಾಯ್ತಿ ಆಡಳಿತಗಳಿಂದ ಸಮರ್ಪಕ ನಾಗರೀಕ ಸೌಲಭ್ಯ ಸಿಗದೆ ಸಂಕಷ್ಟ ಅನುಭವಿಸುತ್ತಿರುವ ನಾಗರೀಕರು, ತಮ್ಮ ಬಡಾವಣೆಗಳನ್ನು ಕೂಡ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಲಾರಂಭಿಸಿದ್ದರು.

ಅದರಲ್ಲಿಯೂ ಅತೀ ಹೆಚ್ಚು ವಸತಿ ಬಡಾವಣೆಗಳನ್ನು ಹೊಂದಿರುವ, ನಗರಕ್ಕೆ ಹೊಂದಿಕೊಂಡಂತಿರುವ ಬಸವನಗಂಗೂರು ಗ್ರಾಮವನ್ನು ಕೂಡ ಪಾಲಿಕೆ ವ್ಯಾಪ್ತಿ ಸೇರ್ಪಡೆಗೆ ಪರಿಗಣಿಸಿರಲಿಲ್ಲ. ಇದಕ್ಕೆ ಸದರಿ ಗ್ರಾಮ ವ್ಯಾಪ್ತಿಯ ಬಡಾವಣೆಗಳ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ತಮ್ಮ ಬಡಾವಣೆಗಳನ್ನು ಪಾಲಿಕೆಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿದ್ದರು.

ಸಲ್ಲಿಕೆಯಾಗಿಲ್ಲ : ವಿವಿಧ ವಸತಿ ಬಡಾವಣೆಗಳ ನಿವಾಸಿಗಳ ಆಗ್ರಹ ಹಾಗೂ ಈ ಹಿಂದಿನ ವರದಿಯ ಬಗ್ಗೆ ಮತ್ತೊಮ್ಮೆ ಪರಿಷ್ಕರಿಸಿ, ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕಚೇರಿಯು ಪಾಲಿಕೆ ಆಡಳಿತಕ್ಕೆ ಸೂಚನೆ ನೀಡಿತ್ತು.

ಆದರೆ ಡಿಸಿ ಕಚೇರಿ ಸೂಚನೆ ನೀಡಿ ಎರಡು ತಿಂಗಳಾಗುತ್ತಾ ಬಂದರೂ ಇಲ್ಲಿಯವರೆಗೂ ಪಾಲಿಕೆ ಆಡಳಿತ ಡಿಸಿ ಕಚೇರಿಗೆ ವರದಿ ಸಲ್ಲಿಸಿಲ್ಲ. ಡಿಸಿ ಆದೇಶಕ್ಕೂ ಕಿಮ್ಮತ್ತು ನೀಡುತ್ತಿಲ್ಲ. ತನಗೂ ಇದಕ್ಕೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವುದು ಸಖೇದಾರ್ಶರ್ಯಕ್ಕೆ ಕಾರಣವಾಗಿದೆ!

ಗಮನಿಸಲಿ : ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಸಂಪೂರ್ಣ ನೆನೆಗುದಿಗೆ ಬೀಳಲಾರಂಭಿಸಿದೆ. ಸರ್ಕಾರದ ಸೂಚನೆ ಪಾಲನೆಯಾಗುತ್ತಿಲ್ಲವಾಗಿದೆ. ತಕ್ಷಣವೇ ಸಿಎಂ ಸಿದ್ದರಾಮಯ್ಯ, ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇತ್ತ ಗಮನಹರಿಸಬೇಕಾಗಿದೆ.

ಹಾಗೆಯೇ ವೈಜ್ಞಾನಿಕವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಗೆ ಕ್ರಮಕೈಗೊಳ್ಳಬೇಕಾಗಿದೆ. ಪ್ರಸ್ತುತ ಸಿದ್ದಪಡಿಸಲಾಗಿರುವ ವರದಿಯಲ್ಲಿ ಕೈಬಿಟ್ಟಿರುವ, ನಗರಕ್ಕೆ ಹೊಂದಿಕೊಂಡಂತಿರುವ ವಸತಿ ಬಡಾವಣೆಗಳನ್ನು ಕೂಡ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಗೆ ಆಡಳಿತಕ್ಕೆ ಸೂಚನೆ ನೀಡಬೇಕಾಗಿದೆ.

Shivamogga, Jul. 29: After almost 30 years, the state government has taken steps to revise the Shivamogga municipal area. But even though the process has started and a year has passed, it has not been completed till now. The process is moving at a snail’s pace. It has literally come to a standstill!

Although the state government itself has taken an interest in revising the Shivamogga Corporation’s jurisdiction and issued an order, the local administration has not yet prepared the final report and submitted it to the government. The entire process is like the saying, ‘God gave boons but he did not give a priest..!’!!

shimoga | Shivamogga : Hindu Mahasabha Ganapati procession – vehicle traffic route changed ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ – ವಾಹನಗಳ ಸಂಚಾರ ಮಾರ್ಗ ಬದಲಾವಣೆ Previous post balebare ghat | ಬಾಳೆಬರೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ!
Power outage in various parts of Shivamogga city - taluk on September 27 ಶಿವಮೊಗ್ಗ ನಗರ - ತಾಲೂಕಿನ ವಿವಿಧೆಡೆ ಸೆಪ್ಟೆಂಬರ್ 27 ರಂದು ವಿದ್ಯುತ್ ವ್ಯತ್ಯಯ Next post shimoga | power cut news | ಶಿವಮೊಗ್ಗ ನಗರದ ವಿವಿಧೆಡೆ ಆಗಸ್ಟ್ 10 ರಂದು ವಿದ್ಯುತ್ ವ್ಯತ್ಯಯ