
shimoga news | ಪೊಲೀಸ್ ಸಿಬ್ಬಂದಿಗಳಿಗೆ ಶಿವಮೊಗ್ಗ ಎಸ್ಪಿ ಕ್ಲಾಸ್!
ಶಿವಮೊಗ್ಗ, ಆಗಸ್ಟ್ 10: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ, ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಠಾಣೆಗಳ ಪೊಲೀಸರು ವಾರದ ಬ್ರೀಫಿಂಗ್ ನಡೆಸಿದರು. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಿಲಕ್ ನಗರದ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಬದಿ ನಡೆದ ಸಭೆಯಲ್ಲಿ, ಎಸ್ಪಿ ಜಿ ಕೆ ಮಿಥುನ್ ಕುಮಾರ್ ಭಾಗಿಯಾಗಿದ್ದರು.
ಈ ವೇಳೆ ಕರ್ತವ್ಯ ನಿರ್ವಹಣೆ ಸೇರಿದಂತೆ, ವಿವಿಧ ವಿಷಯಗಳ ಕುರಿತಂತೆ ಸಿಬ್ಬಂದಿಗಳಿಗೆ ಸಲಹೆ – ಸೂಚನೆಗಳನ್ನು ನೀಡಿದರು. ನಿಯಮಾನುಸಾರ ಕಾರ್ಯನಿರ್ವಹಣೆ ಮಾಡುವಂತೆ ಸಲಹೆ ನೀಡಿದ್ದಾರೆ.
ಸಮಸ್ಯೆ ಪರಿಹರಿಸಿ : ‘ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಈ ವೇಳೆ ಸಾರ್ವಜನಿಕರಿಂದ ವ್ಯಕ್ತವಾಗುವ ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು’ ಎಂದು ಸಿಬ್ಬಂದಿಗಳಿಗೆ ಎಸ್ಪಿ ಅವರು ತಿಳಿಸಿದ್ದಾರೆ.
ಮುಂಬರವು ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಿದ್ದಾರೆ.
ಹೊಸ ಅಪರಾಧಿಕಾ ಕಾನೂನುಗಳ ಅಡಿಯಲ್ಲಿ ಆರೋಪಿಯನ್ನು ಬಂಧನಕ್ಕೆ ಒಳಪಡಿಸಲು ಕೈಗೊಳ್ಳಬೇಕಾದ ಪ್ರಕ್ರಿಯೆ ಹಾಗೂ ಯಾವ ಕಾರಣಕ್ಕಾಗಿ ಬಂಧಿಸಬಹುದು, ಅದಕ್ಕೆ ಸಂಬಂಧಿಸಿದ ಕಾಯ್ದೆ, ಕಲಂ ಸೇರಿದಂತೆ ಮತ್ತೀತರ ವಿವರಗಳ ಕುರಿತಂತೆ ಎಸ್ಪಿ ಅವರು ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಯನಗರ ಠಾಣೆ ಇನ್ಸ್’ಪೆಕ್ಟರ್ ಸಿದ್ದೇಗೌಡ ಸೇರಿದಂತೆ ಮೊದಲಾದವರಿದ್ದರು.
Shimoga, August 6: Weekly briefing was conducted by the police of respective stations at various places in Shimoga district, in public places. SPG K Mithun Kumar was involved in the roadside meeting held at Raghavendra Swami Mutt in Tilak Nagar under Jayanagar Police Station jurisdiction, Shimoga.