
actor darshan | ಚಿತ್ರನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!
ದೆಹಲಿ (delhi), ಆಗಸ್ಟ್ 14: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ನಟಿ ಪವಿತ್ರಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆಗಸ್ಟ್ 14 ರಂದು ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾದ ಜೆ. ಬಿ. ಪರ್ದಿವಾಲಾ ಹಾಗೂ ನ್ಯಾಯಾಧೀಶರಾದ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಇದರಿಂದ ದರ್ಶನ್ ಹಾಗೂ ಇತರೆ ಆರೋಪಿಗಳು ಮತ್ತೆ ಜೈಲು ಸೇರಬೇಕಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2024 ರ ಜೂನ್ 11 ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದರು. ಈ ನಡುವೆ ಹೈಕೋರ್ಟ್ ನಟ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಹಾಗೆಯೇ ನಟಿ ಪವಿತ್ರಗೌಡ ಹಾಗೂ ಇತರೆ ಆರೋಪಿಗಳಿಗೂ ಜಾಮೀನು ದೊರಕಿತ್ತು.
ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ಆದೇಶದ ವಿರುದ್ದ ರಾಜ್ಯ ಸರ್ಕಾರದ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇತ್ತೀಚೆಗೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ, ಆದೇಶ ಕಾಯ್ದಿರಿಸಿತ್ತು.
Delhi, August 14: The Supreme Court on August 14 cancelled the bail of seven accused, including actor Darshan and actress Pavithra Gowda, in the murder case of Chitradurga native Renukaswamy. #ನಟದರ್ಶನ್, #ದರ್ಶನ್, #ರೇಣುಕಸ್ವಾಮಿ, #actordarshan, #darshan, #darshanbail, #renukaswamy,