'The memory of freedom fighters remains eternal in the minds of the people': Minister Madhu Bangarappa ‘ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನಮಾನಸದಲ್ಲಿ ಚಿರಸ್ಥಾಯಿ’ : ಸಚಿವ ಮಧು ಬಂಗಾರಪ್ಪ

shimoga | ‘ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನಮಾನಸದಲ್ಲಿ ಚಿರಸ್ಥಾಯಿ’ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ (shivamogga), ಆಗಸ್ಟ್ 15: ಶಿವಮೊಗ್ಗ ಜಿಲ್ಲೆಯು ಅನೇಕ ಹೋರಾಟಗಾರರಿಗೆ ಜನ್ಮ‌ ನೀಡಿದ್ದು, ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು, ಜನರ ಮನಸ್ಸಿನಲ್ಲಿ ಎಂದಿಗೂ ಚಿರಸ್ಥಾಯಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸ್ಮರಿಸಿದರು.

ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಮಾತನಾಡಿದರು.

ಜಿಲ್ಲೆಯು ಅನೇಕ ಹೋರಾಟಗಾರರಿಗೆ ಜನ್ಮ ನೀಡಿದೆ. ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ನಮ್ಮ ತಂದೆಯವರಾದ ಎಸ್. ಬಂಗಾರಪ್ಪ ನವರು ಸೇರಿದಂತೆ ನಾಲ್ಕು ಮುಖ್ಯ ಮಂತ್ರಿಗಳನ್ನು ನೀಡಿದೆ. ಹಾಗೂ ರಾಷ್ಟ್ರ ಕವಿಗಳಾದ ಕುವೆಂಪು, ಜಿ.ಎಸ್. ಶಿವರುದ್ರಪ್ಪ ಮತ್ತು ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡ ಸೇರಿದಂತೆ ಅನೇಕರು ಜನಿಸಿದ ಪುಣ್ಯಭೂಮಿಯಾಗಿದೆ ಎಂದರು.

ಜಿಲ್ಲೆಗೆ ನೂತನವಾಗಿ 5 ಪಶು ಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಮತ್ಸ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಮಹಿಳಾ ಮೀನುಗಾರರಿಗೆ ಉಚಿತ ಮೀನು ಮರಿ ಮತ್ತು ಮೀನಿನ ಆಹಾರ ವಿತರಣೆ ಹಾಗೂ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಮೀನುಗಾರರ ಕುಟುಂಬಗಳಿಗೆ 25 ಮನೆಗಳನ್ನು ಮಂಜೂರು ಮಾಡಲಾಗಿದೆ.

ಶಿರಾಳಕೊಪ್ಪ, ಅಮೃತ್ ಯೋಜನೆಯಡಿ ಶಿಕಾರಿಪುರ, ಹೊಳೆಹೊನ್ನೂರು, ಜೋಗ-ಕಾರ್ಗಲ್, ಹೊಸನಗರ, ತೀರ್ಥಹಳ್ಳಿ, ಆನವಟ್ಟಿ ಪಟ್ಟಣ ಪಂಚಾಯಿತಿ, ಪುರಸಭೆಗೆ ನೀರು ಸರಬರಾಜು ಕಲ್ಪಿಸುವ ಕಾಮಗಾರಿಗೆ ಶೀಘ್ರುದಲ್ಲಿ ಚಾಲನೆ ದೊರೆಯಲಿದೆ.

ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸೊರಬ ಹಾಗೂ ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ನೂತನ ನೀರಾವರಿ ಯೋಜನೆ ಮಂಜೂರು ಮಾಡಲಾಗಿದ್ದು, ಒಟ್ಟಾರೆ ರೂ. 307.80 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಕುಂಸಿ – ಗಾಜನೂರು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ರೂ.125 ಕೋಟಿ ಅನುಮೊದನೆ ದೊರಕಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ. ಇತ್ತೀಚಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ 4ನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

District in-charge Minister Madhu Bangarappa hoisted the national flag at the Independence Day celebration organized by the District National Festivals Celebration Committee on August 15 at the Nehru Stadium in Shivamogga city.

Shivamogga : School children fell ill during the Independence Day parade!ಶಿವಮೊಗ್ಗ : ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಶಾಲಾ ಮಕ್ಕಳು! Previous post shimoga | ಶಿವಮೊಗ್ಗ : ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಶಾಲಾ ಮಕ್ಕಳು!
Shimoga: Residents celebrate Independence Day in the rain! ಶಿವಮೊಗ್ಗ : ನಿವಾಸಿಗಳಿಂದ ಸ್ವಾತಂತ್ರ್ಯೋತ್ಸವ ಸಂಭ್ರಮ – ರಾಷ್ಟ್ರ ಧ್ವಜಾರೋಹಣ Next post shimoga | ಶಿವಮೊಗ್ಗ : ನಿವಾಸಿಗಳಿಂದ ಸ್ವಾತಂತ್ರ್ಯೋತ್ಸವ ಸಂಭ್ರಮ – ರಾಷ್ಟ್ರ ಧ್ವಜಾರೋಹಣ