shimoga rain | ಭಾರೀ ಮಳೆ : ಆಗಸ್ಟ್ 18 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!

Heavy rains: Holiday declared for schools and colleges in Shivamogga taluk on August 29! ಭಾರೀ ಮಳೆ : ಆಗಸ್ಟ್ 29 ರಂದು ಶಿವಮೊಗ್ಗ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!

ಶಿವಮೊಗ್ಗ (shivamogga), ಆಗಸ್ಟ್ 17: ನಿರಂತರ ಮಳೆ ಹಿನ್ನೆಲೆಯಲ್ಲಿ, ಆಗಸ್ಟ್ 18 ರಂದು ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳು ವ್ಯಾಟ್ಸಾಪ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ. ‘ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು, ಭಾರೀ ಮಳೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ.

ಹಾಗೆಯೇ ಜಲಾನಯನ ಪ್ರದೇಶ ವ್ಯಾಪ್ತಿಗಳಲ್ಲಿ ಧಾರಾಕಾರ ಮಳೆಯಿಂದ ಡ್ಯಾಂಗಳ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 18 ರಂದು ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು, ಪಿಯು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Shivamogga, August 17: In the wake of continuous rains, shimoga DC Gurudatta Hegde has issued an order declaring a holiday for Anganwadis, schools and colleges across the district on August 18.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →