ಶಿವಮೊಗ್ಗ (shivamogga), ಆಗಸ್ಟ್ 25: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ, ಸೆ. 08 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಸಿಸಿ ಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ಕುರಿತಂತೆ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ, ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುತ್ತಿದೆ.
ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆಪ್ಟೆಂಬರ್ 08 ರ ಸೋಮವಾರ ಬೆಳಿಗ್ಗೆ 9.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂ. ಸಂ. 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸುವುದು.
Shivamogga, august 25: A free training camp on CCTV installation and servicing was organized for unemployed men from September 8 to 13 at the Canara Bank Rural Self-Employment Training Institute in Sonnahallipur, Hoskote taluk, Bengaluru Rural District.

