
bengaluru news | ಬೆಂಗಳೂರು | ಆಗಸ್ಟ್ 31 ರಿಂದ ನೋಂದಣಿ – ಮುದ್ರಾಂಕ ಶುಲ್ಕ ಏರಿಕೆ : ಆಯುಕ್ತ ಮುಲ್ಲೈ ಮುಗಿಲನ್ ಹೇಳಿದ್ದೇನು?
ಬೆಂಗಳೂರು (bengaluru), ಅಗಸ್ಟ್ 30: ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆಯಿದೆ. ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಮುದ್ರಾಂಕ ,ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ.
ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು.
ರಾಜ್ಯ ಸರ್ಕಾರವು ದಿನಾಂಕ: 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ ಶೇ.2 ರಷ್ಟು ಪರಿಷ್ಕರಿಸಿದೆ.
ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು.
ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.
ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.
ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
bengaluru, august 30: The property registration fee has been doubled, effective from August 31. The Department of Registration and Stamps has issued this order, resulting in an increase in the registration fee from 1 percent to 2 percent.
Registration and Stamp Duty Commissioner Mulai Mugilan said that the registration and stamp duty rates are currently lower than those in neighbouring states. It is being revised to bring it into line with the rates in other states.