shimoga | Shivamogga : Hindu Mahasabha Ganapati procession – vehicle traffic route changed ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ – ವಾಹನಗಳ ಸಂಚಾರ ಮಾರ್ಗ ಬದಲಾವಣೆ

shimoga | ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ – ವಾಹನಗಳ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ (shivamogga), ಸೆಪ್ಟೆಂಬರ್ 1: ಶಿವಮೊಗ್ಗ ನಗರದಲ್ಲಿ 6/9/2025 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಿವಿಧೆಡೆ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 115 & 117 ರ ಅನ್ವಯ ಅಂದು ಸೆಪ್ಟೆಂಬರ್ 6 ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ.

ವಿವರ: ಸೆ.06 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ-ಎನ್ ಪಿ ಎಂ ಮುಖ್ಯ ರಸ್ತೆ-ರಾಮಣ್ಣ ಶ್ರೇಷ್ಠಿ ಪಾರ್ಕ್-ಗಾಂಧಿ ಬಜಾರ್ ಮುಖ್ಯ ರಸ್ತೆ,

ಎಸ್ ಎನ್ ಸರ್ಕಲ್ -ಎ.ಎ.ಸರ್ಕಲ್- ನೆಹರು ರಸ್ತೆ- ಗೋಪಿ ಸರ್ಕಲ್- ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್ – ಡಿವಿಎಸ್ ಸರ್ಕಲ್ –ಕಾನ್ವೆಂಟ್ ರಸ್ತೆ – ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.

ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಲಾಗಿದೆ.

• ಬೆಂಗಳೂರು ಭದ್ರಾವತಿ, ಎನ್ ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್‌ಗಳು/ಸಿಟಿ ಬಸ್‌ಗಳು ಹಾಗೂ ಕಾರು ವಾಹನಗಳು ಎಂಆರ್‌ಎಸ್ ಸರ್ಕಲ್‌ನಿಂದ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.

• ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.

• ಹೊನ್ನಾಳಿ ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‌ಗಳು ಸಂಗೊಳ್ಳಿರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್ ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರದ ಎಂ.ಆರ್.ಎಸ್. ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

• ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್-ಆಲ್ಕೋಳ ಸರ್ಕಲ್-ಪೊಲೀಸ್ ಚೌಕಿ-ರಾಜ್ ಕುಮಾರ್ ಸರ್ಕಲ್-ಬೊಮ್ಮನಕಟ್ಟೆ-ಸವಳಂಗ ರಸ್ತೆ ಮುಖಾಂತರ ಹೋಗುವುದು.

• ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಎಂ.ಆರ್.ಎಸ್ ಸರ್ಕಲ್ ಮುಖಾಂತರ ಹೋಗುವುದು

• ಶಿಕಾರಿಪುರ ಸೊರಬ ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್ ಲಕ್ಷ್ಮೀ ಟಾಕೀಸ್ ಸರ್ಕಲ್-ಪೊಲೀಸ್ ಚೌಕಿ- ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.

• ಕೋಟೆ ರಸ್ತೆ ಮತ್ತು ಓಲ್ಡ್ ಬಾರ್‌ಲೈನ್ ರಸ್ತೆ ಎಲ್ಲಾ ವಾಹನಗಳ ಸಂಚಾರ ನಿಷೇಧ. ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತೀ ಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

shivamogga, september 1: The Hindu Mahasabha Ganapati Visarjana Pre-Immersion Procession will be held in Shivamogga city on 6/9/2025. In this context, District Collector Gurudatta Hegde has issued a temporary notification prohibiting the movement of vehicles, stopping and diverting the routes of vehicles at various places.

BJP's yatra to Dharmasthala : What did CM Siddaramaiah say? ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? Previous post mysore | ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
shimoga APMC vegetable prices | Details of vegetable prices for November 09 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 09 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 2 ರ ತರಕಾರಿ ಬೆಲೆಗಳ ವಿವರ