Shivamogga: The body of an unidentified woman was found near a bar! ಶಿವಮೊಗ್ಗ : ಬಾರ್ ಸಮೀಪ ಅಪರಿಚಿತ ಮೃತ ಮಹಿಳೆಯ ಮೃತದೇಹ ಪತ್ತೆ!

shimoga | ಶಿವಮೊಗ್ಗ : ಬಾರ್ ಸಮೀಪ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ!

ಶಿವಮೊಗ್ಗ (shivamogga), ಸೆಪ್ಟಂಬರ್ 23: ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಓ. ಟಿ. ರಸ್ತೆಯ ಗ್ರೀನ್ ಹೌಸ್ ಬಾರ್ ಪಕ್ಕದ ಮಳಿಗೆಯ ಮುಂಭಾಗದಲ್ಲಿ, ಮಹಿಳೆಯೋರ್ವರ ಶವ ಪತ್ತೆಯಾದ ಘಟನೆ ನಡೆದಿದೆ.

ಈ ಕುರಿತಂತೆ ಪೊಲೀಸ್ ಇಲಾಖೆ ಸೆಪ್ಟೆಂಬರ್ 23 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಸುಮಾರು 38 ರಿಂದ 40 ವರ್ಷದ  ಮಹಿಳೆಯನ್ನು, ಸಾರ್ವಜನಿಕರ ನೆರವಿನೊಂದಿಗೆ ಆಂಬುಲೆನ್ಸ್ ಮೂಲಕ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪರೀಕ್ಷಿಸಿದ ವೈದ್ಯರು ಮಹಿಳೆ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತರ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಮೃತರ ಚಹರೆ : 5.3 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಎಡ ಕೆನ್ನೆಯ ಕೆಳಭಾಗ ಕಪ್ಪು ಮಚ್ಚೆ ಮತ್ತು ತಲೆಯಲ್ಲಿ 6 ಇಂಚು ಉದ್ದದ ಕೆಂಚು ಕೂದಲು ಇರುತ್ತದೆ. ಮೈ ಮೇಲೆ ಗುಲಾಬಿ ಬಣ್ಣದ ತುಂಬು ತೋಳಿನ ಶರ್ಟ್, ಕೆಂಪು ಹಾಗೂ ಬಳಿ ಬಣ್ಣದ ಡಿಸೈನ್ ಇರುವ ನೈಟಿ ಮತ್ತು ಬಿಳಿ ಲೆಗಿನ್ಸ್ ಧರಿಸಿರುತ್ತಾರೆ.

ಮೃತರ ವಾರಸುದಾರರ ಬಗ್ಗೆ ಸುಳಿವು ದೊರೆತಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಪರ್ಕ ಸಂಖ್ಯೆ : 08182-261414 / 9916882544 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga, September 23: An incident has taken place in which the body of a woman was found in front of a shop next to the Green House Bar on O. T. Road under the jurisdiction of Doddapet Police Station in Shivamogga city.

shimoga APMC vegetable prices | Details of vegetable prices for December 10 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 11 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 23   ರ ತರಕಾರಿ ಬೆಲೆಗಳ ವಿವರ
Sewage from toilets spilling out: Is there such a mess in the Shivamogga AC office building premises?! shimoga | ಶಿವಮೊಗ್ಗ ಉಪ ವಿಭಾಗಾಧಿಕಾರಿ ಕಚೇರಿ ಕಟ್ಟಡ ಆವರಣದಲ್ಲಿ ಇದೆಂಥಾ ಅವ್ಯವಸ್ಥೆ?! Next post shimoga | ಶಿವಮೊಗ್ಗ ಉಪ ವಿಭಾಗಾಧಿಕಾರಿ ಕಚೇರಿ ಕಟ್ಟಡ ಆವರಣದಲ್ಲಿ ಇದೆಂಥಾ ಅವ್ಯವಸ್ಥೆ?!