ಬೆಂಬಲ ಬೆಲೆಯಡಿ ಭತ್ತ ಖರೀದಿ : ಶಿವಮೊಗ್ಗ ಡಿಸಿ ಪ್ರಕಟಣೆಯೇನು?

shimoga news | ಬೆಂಬಲ ಬೆಲೆಯಡಿ ಭತ್ತ ಖರೀದಿ : ಶಿವಮೊಗ್ಗ ಡಿಸಿ ಪ್ರಕಟಣೆಯೇನು?

ಶಿವಮೊಗ್ಗ (shivamogga), ಸೆಪ್ಟೆಂಬರ್ 27: ಪ್ರಸಕ್ತ ಸಾಲಿನ 2025-26 ರ ಮುಂಗಾರು ಹಂಗಾಮಿನಲ್ಲಿ, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತ ಖರೀದಿಸಲು ಮುಂದಾಗಿದೆ.

ಅದರಂತೆ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ 2369 ರೂ. ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ 2389 ರೂ. ದರ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ  TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ.

ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಿದ್ದು, ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ ಗಳಲ್ಲಿರುವ ಕೆಎಫ್‌ಸಿಎಸ್‌ಸಿ (KFCSC) ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ.

ಭತ್ತವನ್ನು ನೊಂದಾಯಿಸಿಕೊಳ್ಳಲು ಅ.31 ಕೊನೆಯ ದಿನಾಂಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಬೇಕು. ನ.1 ರಿಂದ ಫೆ 28 ರವರೆಗೆ ಭತ್ತವನ್ನು ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

shivamogga, September 27 : The Central Government has decided to purchase paddy from the farmers of the state under the Minimum Support Price Scheme for the 2025-26 monsoon season, at a price of Rs. 2369 per quintal for normal paddy and Rs. 2389 per quintal for Grade A paddy.

Shivamogga: Zilla Parishad building work halted halfway - will the CM and ministers take notice? ಶಿವಮೊಗ್ಗ : ಅರ್ಧಕ್ಕೆ ಸ್ಥಗಿತಗೊಂಡ ಜಿಪಂ ಕಟ್ಟಡ ಕಾಮಗಾರಿ – ಗಮನಿಸುವರೆ ಸಿಎಂ, ಸಚಿವರು? Previous post shimoga | ಶಿವಮೊಗ್ಗ : ಅರ್ಧಕ್ಕೆ ಸ್ಥಗಿತಗೊಂಡ ಜಿಪಂ ಕಟ್ಟಡ ಕಾಮಗಾರಿ – ಗಮನಿಸುವರೆ ಸಿಎಂ, ಸಚಿವರು?
Shivamogga Jayanagar police operation : Thirthahalli College employee involved in 3 chain robberies arrested! ಶಿವಮೊಗ್ಗ ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ : 3 ಸರಗಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ತೀರ್ಥಹಳ್ಳಿ ಕಾಲೇಜ್ ನೌಕರ ಅರೆಸ್ಟ್! Next post shimoga crime news | ಶಿವಮೊಗ್ಗ ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ : 3 ಸರಗಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ತೀರ್ಥಹಳ್ಳಿ ಕಾಲೇಜ್ ನೌಕರ ಅರೆಸ್ಟ್!