
mysore news | ‘ಡಿ ಕೆ ಶಿವಕುಮಾರ್ ಸಿಎಂ ಆಗ್ತಾರಾ…?’ : ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು (mysuru), ಅಕ್ಟೋಬರ್ 1: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ.
ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ಕರ್ನಾಟಕ ಜಾತ್ಯಾತೀತ ರಾಜ್ಯ : ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.
ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.
ವಿರೋಧಪಕ್ಷಗಳು ಭವಿಷ್ಯಕಾರರಲ್ಲ : ದಸರಾ ವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ ಎಂದು ತಿಳಿಸಿದರು.
ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ, ನವೆಂಬರ್ ನಲ್ಲಿ ರಾಜಕೀಯ ಕ್ರಾಂತಿ ನಡೆಯಲಿದೆ ಎಂದೆಲ್ಲ ಕೆಲವರು ಮಾತನಾಡುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ‘ಆ ರೀತಿ ಹೇಳುತ್ತಾರೆ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ.
ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು, ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರಿ ನೌಕರರ ತುಟ್ಟಿಭತ್ಯ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದರು.
Mysore, October 1: CM Siddaramaiah spoke to reporters at the Mysore city airport on October 1. Responding to a journalist’s question about some people talking about DK Shivakumar becoming the CM, Siddaramaiah said, “Everyone has to follow the orders of the party leaders. I am confident that I will be the one to lay wreaths at the Dussehra festival in the coming years as well.”