
shimoga | ಶಿವಮೊಗ್ಗ : ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದ ವಕೀಲನ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮನವಿ
ಶಿವಮೊಗ್ಗ (shivamogga), ಅಕ್ಟೋಬರ್ 9: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ, ಕೋರ್ಟ್ ಕಲಾಪದ ವೇಳೆಯೇ ಶೂ ಎಸೆದ ವಕೀಲನ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಆಗ್ರಹಿಸಿದೆ.
ಈ ಸಂಬಂಧ ವೇದಿಕೆಯ ಪ್ರಮುಖರು ಅಕ್ಟೋಬರ್ 9 ರಂದು ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಅರ್ಪಿಸಿದೆ.
ಸದರಿ ಘಟನೆಯು ಅಪಮಾನಕರ ಸಂಗತಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನಕ್ಕೆ ಎಸಗಿದ ಅಪಚಾರವಾಗಿದೆ. ಭಾರತೀಯ ವಕೀಲ ಪರಿಷತ್ ಸದರಿ ವಕೀಲನ ವಕೀಲ ವೃತ್ತಿಗೆ ನೀಡಿರುವ ಅನುಮತಿಯನ್ನು ಶಾಶ್ವತವಾಗಿ ರದ್ದುಪಡಿಸಬೇಕು ಎಂದು ವೇದಿಕೆ ಆಗ್ರಹಿಸಿದೆ.
ಕೇಂದ್ರ ಸರ್ಕಾರವು ಮುಖ್ಯ ನ್ಯಾಯಾಧೀಶರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳಿಗೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಮನವಿ ಅರ್ಪಿಸುವ ವೇಳೆ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಹೆಚ್ ಎನ್ ಶ್ರೀನಿವಾಸ್, ಜಿಲ್ಲಾಧ್ಯಕ್ಷರಾದ ಸಿ. ಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ, ಸಂಘಟನಾ ಕಾರ್ಯದರ್ಶಿ ದೇವೇಂದ್ರಪ್ಪ, ಸಹ ಕಾರ್ಯದರ್ಶಿ ಗಾಜನೂರು ನಾಗರಾಜ್ ಮೊದಲಾದವರಿದ್ದರು.
Shivamogga, October 9: A forum of social service activists has demanded strict action against a lawyer who threw a shoe at Supreme Court Chief Justice B. R. Gavai during court proceedings. In this regard, the leaders of the forum submitted a petition to the President through District Collector Gurudatta Hegde at the DC office on October 9.