ಶಿವಮೊಗ್ಗ (shivamogga), ಅಕ್ಟೋಬರ್ 14: ಶಿವಮೊಗ್ಗ ನಗರದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ, ಅಧಿಕಾರಿಯೋರ್ವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಅಕ್ಟೋಬರ್ 14 ರ ಬೆಳಿಗ್ಗೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸುತ್ತಿರುವ ಸಂಗತಿ ತಿಳಿದುಬಂದಿದೆ.
ದಾವಣಗೆರೆಯ ಕರ್ನಾಟಕ ಮೂಲ ಸೌಕರ್ಯ ಅಭಿವೃದ್ದಿ ನಿಯಮಿತದ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಜಗದೀಶ್ ನಾಯ್ಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
Shivamogga, October 14: It has been learnt that the Lokayukta police conducted a surprise raid on the house of an officer in Indira Gandhi Layout, Shivabasava Nagar, Savalanga Road, Shivamogga city on October 14 and conducted an inspection.

