accident news | ಹೈದ್ರಾಬಾದ್ – ಬೆಂಗಳೂರು ಬಸ್ ಬೆಂಕಿಗಾಹುತಿ : 20 ಪ್ರಯಾಣಿಕರ ಸಜೀವ ದಹನ ಶಂಕೆ!
ಕರ್ನೂಲ್ (ಆಂಧ್ರಪ್ರದೇಶ), ಅಕ್ಟೋಬರ್ 24: ಹೈದ್ರಾಬಾದ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ವೊಂದು ಬೆಂಕಿಗಾಹುತಿಯಾದ ಪರಿಣಾಮ, ಬಸ್ ನಲ್ಲಿದ್ದ 20 ಪ್ರಯಾಣಿಕರು ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಅಕ್ಟೋಬರ್ 24 ರ ಮುಂಜಾನೆ ಸಂಭವಿಸಿದೆ.
ಮುಂಜಾನೆ 3. 30 ರ ವೇಳೆಗೆ ಸದರಿ ದುರ್ಘಟನೆ ಸಂಭವಿಸಿದೆ. ಈ ವೇಳೆ ಭಾರೀ ಮಳೆಯಾಗುತ್ತಿತ್ತು ಎನ್ನಲಾಗಿದೆ. ಬೈಕ್’ಗೆ ಡಿಕ್ಕಿ ಹೊಡೆದ ನಂತರ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿಯೇ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಯಿಂದ ಹೊತ್ತಿ ಉರಿಯಲಾರಂಭಿಸಿದೆ ಎಂದು ತಿಳಿದುಬಂದಿದೆ.
ಸದರಿ ಬಸ್ ಕಾವೇರಿ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ್ದಾಗಿದೆ ಎನ್ನಲಾಗಿದೆ. ಸುಮಾರು 40 ಪ್ರಯಾಣಿಕರಿದ್ದರು. ಇದರಲ್ಲಿ 20 ಪ್ರಯಾಣಿಕರು ಬಸ್ ನಿಂದ ಹೊರಬಂದು ಜೀವ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಉಳಿದ ಪ್ರಯಾಣಿಕರು ಬಸ್ ನಲ್ಲಿಯೇ ಸಜೀವ ದಹನಗೊಂಡಿದ್ದಾರೆ ಎಂದು ಹೇಳಲಾಗಿದೆ.
ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಭೀಕರ ಘಟನೆಗೆ ಪ್ರಧಾನಮಂತ್ರಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದೆ.
Andhra Pradesh : A heartbreaking incident occurred on the early morning of October 24 when a private bus en route from Hyderabad to Bengaluru caught fire, burning 20 passengers alive near Chinnatekur in Kurnool district of Andhra Pradesh.
