A child playing on the road died after being hit by a car near Virupinakoppa in Shivamogga! ಶಿವಮೊಗ್ಗ : ವಿರುಪಿನಕೊಪ್ಪ ಬಳಿ ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ ಮಗು ಸಾವು!

shimoga accident news | ಶಿವಮೊಗ್ಗ : ವಿರುಪಿನಕೊಪ್ಪ ಬಳಿ ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ ಮಗು ಸಾವು!

ಶಿವಮೊಗ್ಗ (shivamogga), ಅಕ್ಟೋಬರ್ 27: ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ವಿರುಪಿನಕೊಪ್ಪದಲ್ಲಿ ಇತ್ತೀಚೆಗೆ ನಡೆದಿದೆ.

ಷಣ್ಮುಖ ಎಂಬುವರ ಪುತ್ರ ವಿನಯ್ (2) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಆಟವಾಡುವ ವೇಳೆ ಕೋಟೆಗಂಗೂರು ಕಡೆಯಿಂದ ಸಾಗರ ರಸ್ತೆಯೆಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿಯಿಂದ ವಿನಯ್ ತಲೆ, ಕೈ ಸೇರಿದಂತೆ ದೇಹದ ವಿವಿಧೆಡೆ ತೀವ್ರ ಸ್ವರೂಪದ ಗಾಯವಾಗಿತ್ತು. ಕೂಡಲೇ ಮಗುವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga, October 27: A two-year-old child who was playing on the road was hit by a car and died, in an incident that took place in Virupinakoppa, on the outskirts of Shivamogga city.

Establishment of Shimoga - Bhadravati Police Commissionerate Office which fell into confusion! ನೆನೆಗುದಿಗೆ ಬಿದ್ದ ಶಿವಮೊಗ್ಗ – ಭದ್ರಾವತಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ! Previous post shimoga police news | ನೆನೆಗುದಿಗೆ ಬಿದ್ದ ಶಿವಮೊಗ್ಗ – ಭದ್ರಾವತಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ!
Shivamogga - Bhadravati rail route review: Alternative route for vehicular traffic! ಶಿವಮೊಗ್ಗ - ಭದ್ರಾವತಿ ನಡುವಿನ ರೈಲ್ವೆ ಗೇಟ್ ಗಳ ಪರೀಶೀಲನೆ : ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ! Next post shimoga railway news | ಶಿವಮೊಗ್ಗ – ಭದ್ರಾವತಿ ನಡುವಿನ  ರೈಲ್ವೆ ಗೇಟ್ ಗಳ ಪರೀಶೀಲನೆ : ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ!