ಶಿವಮೊಗ್ಗ (shivamogga), ಅಕ್ಟೋಬರ್ 27: ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲೀಪುರ ಗ್ರಾಮದ ಕಾರ್ಮಿಕ ಇಲಾಖೆ ಕಟ್ಟಡದ ಬಳಿ ಅಕ್ಟೋಬರ್ 26 ರಂದು ನಡೆದಿದೆ.
ಮಂಜು (35) ಮೃತಪಟ್ಟ ಕಟ್ಟಡ ಕಾರ್ಮಿಕ ಎಂದು ಗುರುತಿಸಲಾಗಿದೆ. ಈತನ ಸಹೋದರ ಮುತ್ತು (30) ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ಲೀಪುರ ಗ್ರಾಮದಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ವಸತಿ ವಸತಿ ಸಮುಚ್ಚಯ ಕಟ್ಟಡ ನಿರ್ಮಿಸಲಾಗಿದೆ. ಕಳೆದ ಕೆಲ ತಿಂಗಳುಗಳ ಹಿಂದೆ ಸದರಿ ಕಟ್ಟಡ ಲೋಕಾರ್ಪಣೆಗೊಳಿಸಲಾಗಿದೆ. ಕಟ್ಟಡ ನಿರ್ಮಾಣದ ವೇಳೆ ತಾತ್ಕಾಲಿಕ ಶೆಡ್ ಮಾದರಿ ಕಟ್ಟಡ ನಿರ್ಮಿಸಲಾಗಿತ್ತು.
ಸದರಿ ಕಟ್ಟಡ ತೆರವುಗೊಳಿಸುವ ವೇಳೆ ದಿಡೀರ್ ಆಗಿ ಗೋಡೆ ಕುಸಿದು ಬಿದ್ದು, ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga: Worker dies after building wall collapses! | Shivamogga, October 27: An incident occurred on October 26 near the Labor Department building in Sidlipura village of Shivamogga taluk, where a building wall collapsed, killing one worker on the spot and seriously injuring another.

