shimoga news | ಭದ್ರಾವತಿ ವ್ಯಕ್ತಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 65 ಸಾವಿರ ರೂ. ದಂಡ : ಕಾರಣವೇನು?
ಶಿವಮೊಗ್ಗ (shivamogga), ನವೆಂಬರ್ 20: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೋರ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC – 1 ಕೋರ್ಟ್ ತೀರ್ಪು ನೀಡಿದೆ.
ಭದ್ರಾವತಿ ತಾಲೂಕಿನ 30 ವರ್ಷದ ವ್ಯಕ್ತಿಯೇ ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ (ಪೋಕ್ಸೋ ಪ್ರಕರಣದಲ್ಲಿ ಹೆಸರು, ಊರಿನ ವಿವರ ಬಹಿರಂಗಪಡಿಸುವಂತಿಲ್ಲ). ಜೈಲು ಶಿಕ್ಷೆ ಜೊತೆಗೆ 65 ಸಾವಿರ ರೂ. ದಂಡ ಕೂಡ ವಿಧಿಸಲಾಗಿದೆ. ಹಾಗೆಯೇ ನೊಂದ ಬಾಲಕಿಗೆ 4. 50 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : 2022 ನೇ ಸಾಲಿನಲ್ಲಿ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಕುರಿತಂತೆ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಸೇರಿದಂತೆ ಐಪಿಸಿಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.
ಭದ್ರಾವತಿ ನಗರ ವೃತ್ತದ ಸರ್ಕಲ್ ಇನ್ಸ್’ಪೆಕ್ಟರ್ ಆಗಿದ್ದ ರಾಘವೇಂದ್ರ ಕಾಂಡಿಕೆ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.
Shivamogga, November 20: The Additional District and Sessions Court, FTSC-1, in Shivamogga has sentenced a man to 20 years in rigorous imprisonment for sexually assaulting a minor girl.
