ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..!

ವಿಧಾನಸಭೆ ಚುನಾವಣೆ : ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! ಲಕ್ಷಾಂತರ ರೂ. ಮೌಲ್ಯದ ಸೀರೆ ದಾಸ್ತಾನು ಪತ್ತೆ : ಮುಂದುವರಿದ ಕಟ್ಟುನಿಟ್ಟಿನ ತಪಾಸಣೆ

ಶಿವಮೊಗ್ಗ, ಎ. 25: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಹಣದ ವಿವರ:  ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ, ಸೂಕ್ತ ದಾಖಲೆಯಿಲ್ಲದೆ ವಾಹನದಲ್ಲಿ ಸಾಗಾಣೆ ಮಾಡುತ್ತಿದ್ದ 5 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಇದೇ ಠಾಣಾ ವ್ಯಾಪ್ತಿಯಲ್ಲಿ ಎ. 24 ರಂದು 12 ಲಕ್ಷ ರೂ. ಅಮಾನತ್ತು ಪಡಿಸಿಕೊಳ್ಳಲಾಗಿತ್ತು.

ಮಂಗಳವಾರ ಸಾಗರ ಪಟ್ಟಣದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವಾಹನವೊಂದರಲ್ಲಿ ಕೊಂಡೊಯ್ಯಲಾಗುತ್ತಿದ್ದ 3.75 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ.

ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 98 ಲಕ್ಷ ರೂ. ಹಾಗೂ ಅದೇ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 45 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

ಸೀರೆಗಳು ವಶಕ್ಕೆ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ವಾಹನದಲ್ಲಿ ಕೊಂಡೊಯ್ಯುತ್ತಿದ್ದ 59 ಲಕ್ಷ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5.40 ಲಕ್ಷ ರೂ. ಮೌಲ್ಯದ ಸೀರೆ ವಶಕ್ಕೆ ಪಡೆಯಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *