ಶಿವಮೊಗ್ಗ (shivamogga), ಡಿಸೆಂಬರ್ 09: ಶಿವಮೊಗ್ಗದ ರಾಗಿಗುಡ್ಡದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಯುವಕನೋರ್ವ, ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆ ಹಿರೇಕರೂರು ತಾಲೂಕಿನ ಇಂಗಳಗೊಂಡಿ ಗ್ರಾಮದ ನಿವಾಸಿ ಸಿದ್ದಪ್ಪ ತಾರಗಿ ಎಂಬುವವರ ಪುತ್ರ ಕಿರಣ್ ಕುಮಾರ್ ಎಸ್. ಟಿ. (36) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ.
ಕಳೆದ ಏಪ್ರಿಲ್ 16 ರಂದು ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ವಾಸವಿದ್ದ ಬಾಡಿಗೆ ಮನೆಯಿಂದ ಕಾಣೆಯಾಗಿದ್ದಾರೆ. ಎಲ್ಲಿಯೂ ಅವರ ಸುಳಿವು ಲಭ್ಯವಾಗಿಲ್ಲ.
ಚಹರೆ : ನಾಪತ್ತೆಯಾದ ಯುವಕ 5.6 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಕೆನ್ನೆಯ ಮೇಲೆ ಕಪ್ಪು ಮಚ್ಚೆ ಇರುತ್ತದೆ.
ಸದರಿ ವ್ಯಕ್ತಿಯ ಸುಳಿವು ದೊರತಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 08182-261400/ 261418/ 9480803332 / 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Shivamogga, December 09: A young man who was living in a rented house in Ragigudda, Shivamogga, has mysteriously disappeared.

