shimoga news | ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮತ್ತೆ ಚರ್ಚೆಯ ಮುನ್ನೆಲೆಗೆ! The establishment of a police commissionerate office in Shivamogga is back in the spotlight! *Home Minister Parameshwar gave a positive response to legislator Channabasappa's demand

shimoga news | ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮತ್ತೆ ಚರ್ಚೆಯ ಮುನ್ನೆಲೆಗೆ!

ಶಿವಮೊಗ್ಗ (shivamogga), ಡಿಸೆಂಬರ್ 17: ಶಿವಮೊಗ್ಗ ನಗರದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮಾಡಬೇಕೆಂಬ ಬೇಡಿಕೆ ಹಲವು ವರ್ಷಗಳದ್ದಾಗಿದೆ. ಆದರೆ ಆಡಳಿತಗಾರರ ದಿವ್ಯ ನಿರ್ಲಕ್ಷ್ಯದಿಂದ ಇಲ್ಲಿಯವರೆಗೂ ಸದರಿ ಬೇಡಿಕೆ ಕಾರ್ಯರೂಪಕ್ಕೆ ಬಂದಿಲ್ಲ. ಸಂಪೂರ್ಣ ನೆನೆಗುದಿಗೆ ಬೀಳುವಂತಾಗಿತ್ತು!

ಈ ನಡುವೆ, ಶಿವಮೊಗ್ಗ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ವಿಷಯ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಚನ್ನಬಸಪ್ಪ ಅವರು ಡಿಸೆಂಬರ್ 16 ರಂದು ವಿಷಯ ಪ್ರಸ್ತಾಪಿಸಿದ್ದಾರೆ.

ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಶಿವಮೊಗ್ಗ ನಗರದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆಯ ಅಗತ್ಯತೆಯ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯ ನಡೆಸಿದ್ದಾರೆ.

ಶಿವಮೊಗ್ಗ ನಗರದ ಪೊಲೀಸ್ ಠಾಣೆಗಳಲ್ಲಿನ ಸಿಬ್ಬಂದಿಗಳ ಕೊರತೆ ಹಾಗೂ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಬಗ್ಗೆ ಕ್ರಮಕೈಗೊಳ್ಳುವಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿ ಪರಮೇಶ್ವರ್ ಅವರು, ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದರಿಂದ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ವಿಷಯವೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬರುವಂತಾಗಿದೆ.

*** . ರಾಷ್ಟ್ರ-ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ಎರಡನೇ ಹಂತದ ನಗರಗಳಲ್ಲಿ ಶಿವಮೊಗ್ಗವೂ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ ಅತೀ ಹೆಚ್ಚು ಅಪರಾಧ ಪ್ರಕರಣಗಳು ವರದಿಯಾಗುವ ನಗರಗಳಲ್ಲಿ ಒಂದಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ಇದು ನಗರದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿದೆ.ಆದರೆ ಹೆಚ್ಚುತ್ತಿರುವ ಕ್ರೈಂ ಸಂಖ್ಯೆಗೆ ಅನುಗುಣವಾಗಿ, ನಗರದಲ್ಲಿ ಪೊಲೀಸ್ ಬಲವಿಲ್ಲವಾಗಿದೆ. ಆಡಳಿತಗಾರರ ನಿರ್ಲಕ್ಷ್ಯ ಧೋರಣೆ ಕಂಡುಬರುತ್ತಿದೆ. ಇದು ಸಹಜವಾಗಿಯೇ ಕ್ರೈಂ ಚಟುವಟಿಕೆ ಏರಿಕೆಗೂ ಕಾರಣವಾಗಿದೆ. ಇದರಿಂದ ನಾಗರೀಕರಲ್ಲಿ ಅಭದ್ರತೆಯ ವಾತಾವರಣ ಹೆಚ್ಚಾಗಲಾರಂಭಿಸಿದೆ.

ಮತ್ತೊಂದೆಡೆ, ವರ್ಷದಿಂದ ವರ್ಷಕ್ಕೆ ನಗರ ವ್ಯಾಪ್ತಿ – ವಿಸ್ತೀರ್ಣ, ಜನಸಂಖ್ಯೆ ಹೆಚ್ಚಾಗುತ್ತಿದೆ. ಸಹಜವಾಗಿಯೇ ಅಪರಾಧ ಕೃತ್ಯಗಳ ಪ್ರಮಾಣವೂ ಏರುತ್ತಿದೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ನಗರದಲ್ಲಿ ಪೊಲೀಸ್ ಬಲವಿಲ್ಲವಾಗಿದೆ. ಈ ಕಾರಣದಿಂದ ಶಿವಮೊಗ್ಗಕ್ಕೆ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪಿಸಿದರೆ ಸಾಕಷ್ಟು ಅನುಕೂಲವಾಗಲಿದೆ. ಪೊಲೀಸ್ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆಗೆ ಕಾರಣವಾಗಲಿದೆ.

ಸದ್ಯ ಶಿವಮೊಗ್ಗ ನಗರದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ, ಭದ್ರಾವತಿಯಲ್ಲಿ ಸಿ.ಆರ್.ಪಿ.ಎಫ್. ಹಾಗೂ ಮಾಚೇನಹಳ್ಳಿಯಲ್ಲಿ ಕೆ.ಎಸ್.ಆರ್.ಪಿ. ಬೆಟಾಲಿಯನ್ ಕಾರ್ಯನಿರ್ವಹಣೆ ಮಾಡುತ್ತಿವೆ. ಶಿವಮೊಗ್ಗ – ಭದ್ರಾವತಿ ನಗರಗಳಲ್ಲಿ ಕಮೀಷನರೇಟ್ ವ್ಯವಸ್ಥೆ ಜಾರಿಗೊಂಡರೆ, ಭದ್ರತಾ ವ್ಯವಸ್ಥೆಯಲ್ಲಿ ಹೊಸ ಮುನ್ನುಡಿಗೆ ಜಿಲ್ಲೆ ಸಾಕ್ಷಿಯಾಗಲಿದೆ.

*** ಬೆಳಗಾವಿ ವಿಧಾನಸಭೆ ಅಧಿವೇಶನದ ವೇಳೆ, ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ಲಕ್ಷಾಂತರ ನಾಗರೀಕರಿಗೆ ಅನುಕೂಲವಾಗುವ ಮಹತ್ವದ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಹಾಗೂ ನಗರದ ಪೊಲೀಸ್ ಠಾಣೆಗಳಲ್ಲಿ ಅಧಿಕಾರಿ – ಸಿಬ್ಬಂದಿಗಳ ಕೊರತೆಯ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯ ನಡೆಸಿದ್ದಾರೆ. ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಚನ್ನಬಸಪ್ಪ ಅವರ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕುರಿತಂತೆ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ.

The demand for the establishment of a Police Commissionerate office in Shivamogga city has been going on for many years. But due to the sheer negligence of the administration, the said demand has not been implemented till now. It was a complete setback! During the ongoing Legislative Assembly session in Belgaum, MLA Channabasappa on December 16 drew the government’s attention to the need to establish a Police Commissionerate office in the rapidly developing city of Shivamogga. They have urged Home Minister G Parameshwar to take action regarding the shortage of staff in police stations in Shivamogga city and the establishment of a police commissionerate office.

The municipal administration does not listen to the concerns of the residents of Hanumanth Nagar in Shivamogga! ಶಿವಮೊಗ್ಗದ ಹನುಮಂತ ನಗರ ನಿವಾಸಿಗಳ ಗೋಳು ಆಲಿಸದ ಪಾಲಿಕೆ ಆಡಳಿತ! Previous post shimoga news | ಶಿವಮೊಗ್ಗದ ಹನುಮಂತ ನಗರ ನಿವಾಸಿಗಳ ಗೋಳು ಆಲಿಸದ ಪಾಲಿಕೆ ಆಡಳಿತ!