ಎ. 27 ರಂದು ಶಿವಮೊಗ್ಗಕ್ಕೆ ರಾಹುಲ್, ಪ್ರಿಯಾಂಕ ಗಾಂಧಿ : ಶಿಕಾರಿಪುರಕ್ಕೆ ಜೆ.ಪಿ.ನಡ್ಡಾ
ಶಿವಮೊಗ್ಗ, ಎ. 26: ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.
ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಈ ಇಬ್ಬರು ನಾಯಕರು, ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ತೆರಳುತ್ತಿದ್ದಾರೆ.
ಮತ್ತೊಂದೆಡೆ, ಎ. 27 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರು ಶಿಕಾರಿಪುರ ತಾಲೂಕಿನ ವಿವಿಧೆಡೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ.
ಉಳಿದಂತೆ ಮೇ ತಿಂಗಳಲ್ಲಿ ಬಿಜೆಪಿ ನಾಯಕರಾದ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಅಧಿಕೃತ ದಿನಾಂಕಗಳು ಇನ್ನಷ್ಟೆ ಖಚಿತವಾಗಬೇಕಾಗಿದೆ.

