Auto rickshaw prepaid counters at KSRTC and private bus stands in Shivamogga city: DC information ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ - ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ : ಡಿಸಿ ಮಾಹಿತಿ

shimoga news | ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ – ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ಪ್ರೀ ಪೇಯ್ಡ್ ಕೌಂಟರ್ : DC ಮಾಹಿತಿ

ಶಿವಮೊಗ್ಗ (shivamogga), ಡಿಸೆಂಬರ್ 23: ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್‌ಗಳನ್ನು ತೆರೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಮಂಗಳವಾರ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಟೋ ರಿಕ್ಷಾ ಸಂಘಗಳು ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿದ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ನಗರದ ರೈಲ್ವೆ ನಿಲ್ದಾಣದ ಬಳಿ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ ಸ್ಥಾಪಿಸಲಾಗಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಇದೇ ರೀತಿಯಲ್ಲಿ ನಗರದ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲೂ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್ ತೆರೆಯಲು ಮುಂದಾಗಿದ್ದು, ಇನ್ನು ಮುಂದೆ ಬಸ್ ಪ್ರಯಾಣಿಕರು ಇದರ ಅನುಕೂಲ ಪಡೆಯಬಹುದು ಎಂದರು.

ಜನವರಿ15 ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಕೌಂಟರ್ ಪ್ರಾರಂಭಿಸುವಂತೆ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿವರಿಗೆ ಅನುಮೋದನೆ ನೀಡಲಾಗಿದ್ದು, ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಕೌಂಟರ್‌ಗಳಿಗೆ ಸ್ಥಳ ನಿಗದಿಪಡಿಕೊಡಬೇಕು. ಈ ಬಗ್ಗೆ ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ತಪಾಸಣೆ ನಡೆಸಿ ಜಾಹಿರಾತು ಫಲಕಗಳು ಹಾಗೂ ಘೋಷಣೆಯ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು. 

ಮುಂಜಾನೆ 4.45, ಬೆಳಿಗ್ಗೆ 11 ಗಂಟೆ, ಸಂಜೆ 7.30 ಹಾಗೂ ರಾತ್ರಿ 9.30 ರ ಸಮಯದಲ್ಲಿ ಪ್ರಯಾಣಿಕರು ಮನೆಗೆ ತೆರಳಲು ಆಟೋ ರಿಕ್ಷಾಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಹಾಗಾಗಿ ರೈಲ್ವೆ ನಿಲ್ದಾಣದ ಬಳಿ ಇರುವ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿ ಹಾಗೂ ಕೌಂಟರ್‌ನಲ್ಲಿ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ ಪ್ರಯಾಣಿಕರ ಸಂಚಾರವನ್ನು ಸುಗಮ ಮಾಡಬೇಕು ಎಂದು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿಯವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. 

ಜಿಲ್ಲೆಯಲ್ಲಿರುವ ಆಟೋ ಚಾಲಕರು ಕಡ್ಡಾಯವಾಗಿ ಪರವಾನಗಿ ಮತ್ತು ಬ್ಯಾಡ್ಜ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸರಿಯಾಗಿಟ್ಟುಕೊಂಡು ಶಿಸ್ತಿನಿಂದ ಕಾರ್ಯ ನಿರ್ವಹಿಸಬೇಕು. ಪ್ರೀ ಪೇಯ್ಡ್ ಆಟೋ ರಿಕ್ಷಾಗಳನ್ನು ನೋಂದಣಿ ಮಾಡಿಕೊಳ್ಳಬೇಕು. ರೈಲ್ವೆ ಹಾಗೂ ಬಸ್ ನಿಲ್ದಾಣಗಳ ಒಳಗೂ ಹೊರಗೂ ಆಟೋ ರಿಕ್ಷಾ ಪ್ರೀ ಪೇಯ್ಡ್ ಕುರಿತು ಫಲಕಗಳು ಹಾಗೂ ಘೋಷಿಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಇದಕ್ಕೆ ಆಟೋ ಸಂಘಗಳು ಕೂಡ ಸಹಕಾರ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಕಾರ್ಯಪ್ಪ, ಆರ್‌ಟಿಓ ಅಧೀಕ್ಷಕ ಶಶಿಧರ್, ಸಂಚಾರಿ ಪೊಲೀಸ್ ನಿರೀಕ್ಷಕ ದೇವರಾಜ್, ಮಹಾನಗರಪಾಲಿಕೆಯ ಅಧಿಕಾರಿ, ಚೈತನ್ಯ ರೂರಲ್ ಡೆವಲಪ್‌ಮೆಂಟ್ ಅಧಿಕಾರಿಗಳು ಹಾಗೂ ಆಟೋ ರಿಕ್ಷಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

District Collector Gurudatta Hegde said that new auto rickshaw prepaid counters are being opened near the KSRTC and private bus stands in Shivamogga city for the smooth travel of passengers

The number of borewells being drilled in Shivamogga city is increasing: Is the administration turning a blind eye?! *Is the focus shifting towards strengthening public drinking water supply? ಶಿವಮೊಗ್ಗ ನಗರದಲ್ಲಿ ಹೆಚ್ಚಾಗುತ್ತಿದೆ ಬೋರ್ವೆಲ್ ಗಳ ಕೊರೆತ : ಕಣ್ಮುಚ್ಚಿ ಕುಳಿತ್ತಿದೆಯೇ ಆಡಳಿತ?! *ಸಾರ್ವಜನಿಕ ಕುಡಿಯುವ ನೀರು ಪೂರೈಕೆಯ ಬಲವರ್ಧನೆಯತ್ತ ಹರಿಯುವುದೆ ಚಿತ್ತ? Previous post shimoga news | ಶಿವಮೊಗ್ಗ ನಗರದಲ್ಲಿ ಹೆಚ್ಚಾಗುತ್ತಿದೆ ಬೋರ್‌ವೆಲ್‌ ಗಳ ಕೊರೆತ : ಕಣ್ಮುಚ್ಚಿ ಕುಳಿತಿದೆಯೇ ಆಡಳಿತ?!
The mysterious disappearance of a woman from Bhadravati! ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ! Next post bhadravati news | ಭದ್ರಾವತಿಯಲ್ಲಿ ಅಸ್ಸಾಂ ರಾಜ್ಯದ ಮಹಿಳೆಯ ನಿಗೂಢ ಕಣ್ಮರೆ!