Bengaluru news | ಬೆಂಗಳೂರು | ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ : ಹಲವು ಮಹತ್ವದ ಬದಲಾವಣೆ!
ಬೆಂಗಳೂರು (bangalore), ಡಿಸೆಂಬರ್ 25: ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95 ರ ತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ.
ಕಳೆದ 2 ವರ್ಷದಲ್ಲಿ ಭೂ ಕಂದಾಯ ಕಾಯ್ದೆ 1964 ರ ವಿವಿಧ ಕಲಂಗಳಿಗೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದಲ್ಲಿ ಪ್ರಗತಿಪಥ ದತ್ತ ಹಾಗೂ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತಕ್ಕೆ ನಾಂದಿ ಹಾಡಲು ಪ್ರಯತ್ನಿಸಲಾಗಿದ್ದು, 47 ಕಲಂಗಳಿಗೆ 9 ತಿದ್ದುಪಡಿ ತರಲಾಗಿದೆ.
ಕರ್ನಾಟಕ ಭೂ ಕಂದಾಯ ನಿಯಮಗಳು 1966 ನ್ನುಸಮಗ್ರವಾಗಿ 56 ವರ್ಷಗಳ ತರುವಾಯ 44 ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, 1974ರದೇವರಾಜು ಅರಸು ಭೂ ಸುಧಾರಣಾ ಕಾಯ್ದೆ 1961ಕ್ಕೆ145 ಕಡೆ ತಿದ್ದುಪಡಿ ತಂದು ಕಾನೂನಿಗೆ ಸ್ವಾತಂತ್ರ್ಯನೀಡಲಾಗಿತ್ತು. ಅದಾದ ಬಳಿಕ ಸಮಗ್ರ ತಿದ್ದುಪಡಿತಂದಿರುವುದು ಇದೇ ಮೊದಲು.
ಈ ತಿದ್ದುಪಡಿ ಮೂಲಕ ಕಂದಾಯ ನ್ಯಾಯಾಲಯಗಳನ್ನು ಪಾರದರ್ಶಕವಾಗಿ, ನಿಯಮಬದ್ಧವಾಗಿ ನಡೆಸಲು ಹಾಗೂ ಸಾರ್ವಜನಿಕರಿಗೆಸರಳ- ಸುಳಲಿತ ನ್ಯಾಯದಾನ ನೀಡಲುತೀರ್ಮಾನಿಸಲಾಗಿದೆ.
ಭೂ ಪರಿವರ್ತನೆಯನ್ನು ಸರಳೀಕೃತವಾಗಿ ಪ್ರಕ್ರಿಯೆಗೊಳಪಡಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತಸಾಗಿಸಲು ಹಾಗೂ ಬಂಡವಾಳ ಹೂಡಿಕೆಗೆ ಹೂಡಿಕೆದಾರರಸ್ನೇಹಿಯಾಗಿ ಖರೀದಿಸಲಾದ ಭೂಮಿಗೆ ಭೂ ಪರಿವರ್ತನೆನೀಡಲು ತಿದ್ದುಪಡಿ ತರಲಾಗಿದೆ.
ಭೂ ಪರಿವರ್ತನೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮೂಲಕ ಯಾವೆಲ್ಲಾ ವಿಚಾರಗಳನ್ನು ಸರಳೀಕರಣ ಮಾಡಲಾಗಿದೆ..?
ಮಾಸ್ಟರ್ ಪ್ಲಾನ್ ಪ್ರಕಾರ ಭೂ ಬಳಕೆಗೆ ಪರಿವರ್ತನೆ ಅವಶ್ಯಕತೆ ತೆಗೆದುಹಾಕಲಾಗಿದೆ. ಇಂತಹ ಪ್ರಕರಣಗಳಲ್ಲಿ ನೇರವಾಗಿ Plan approval ಗೆ ಹೋಗಬಹುದು. ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಪರಿಭಾವಿತ ಭೂ ಪರಿವರ್ತನೆ (ಡೀಮ್ಡ್ ಕನ್ವರ್ಷನ್) ಸಹ ಈ ಹಿಂದೆ ಮೂರು ನಾಲ್ಕು ತಿಂಗಳುಸಮಯ ಆಗುತ್ತಿತ್ತು. ಆದರೆ, ಪ್ರಸ್ತುತ 30 ದಿನಗಳಲ್ಲಿ ಭೂಪರಿವರ್ತನೆ ಕಡ್ಡಾಯಗೊಳಿಸಲಾಗಿದೆ.
ಭೂ ಪರಿವರ್ತನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಪರಿವರ್ತನೆಗೆಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ.
ಸಣ್ಣ ಕೈಗಾರಿಕೆಗಳು ಎರಡು ಎಕರೆ ವರೆಗೆ ಕೈಗಾರಿಕಾಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ. ಭಾರತ ದೇಶದಲ್ಲಿ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ.
ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು ನಿರ್ಮಿಸಲುಭೂ ಪರಿವರ್ತನೆ ಅಗತ್ಯ ಇಲ್ಲ. ಭೂ ಪರಿವರ್ತನೆಗೆ ಸಂಬಂಧಿಸಿದ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ.
ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಕಂದಾಯನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈಹಿಂದೆ ಯಾವುದೇ ಸ್ಪಷ್ಟ ನಿಯಮ ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನುಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ.
RCCMS ಸೇರಿದಂತೆ ಡಿಜಿಟೈಶೇಷನ್ ಮುಖಾಂತರ ಆದೇಶಗಳನ್ನು ನೀಡಲಾಗುವುದು. ಇವು ಸುಧಾರಣಾ ಕಾನೂನುಗಳಿಗೆ ನ್ಯಾಯಿಕ ಬಲವನ್ನು ಒದಗಿಸಲಾಗಿದೆ. ಹೀಗಾಗಿ ಅದಕ್ಕೂ ನಿಯಮಗಳನ್ನು ರೂಪಿಸಿ ಸರಿಪಡಿಸಲಾಗಿದೆ. ಕಾನೂನು ಮೀರಿ ಯಾರೂ ನ್ಯಾಯಧಾನ ನೀಡಲು ಸಾಧ್ಯವಿಲ್ಲ. ಹೀಗೆ ವಿವಿಧ ಕಲಂಗಳು ಹಾಗೂ ನಿಯಮಗಳಿಗೆ ತಿದ್ದುಪಡಿ ಮೂಲಕ ಜಾರಿಗೊಳಿಸಲಾಗಿದೆ.
ಕಂದಾಯ ನ್ಯಾಯಾಲಯಗಳನ್ನು online ಮುಖಾಂತರ ನಡೆಸಲು ಕಾನೂನು ತರಲಾಗಿದೆ. ವಾದಿ ಹಾಗೂ ಪ್ರತಿವಾದಿಗಳು ಕಚೇರಿಗಳಿಗೆ ಸುತ್ತುವುದರ ಬದಲಿಗೆ ಅವರು online ಮುಖಾಂತರವೇ ನ್ಯಾಯಾಲಯ ಕಲಾಪಗಳಿಗೆ ಭಾಗವಹಿಸುವ ಸುಲಭ ಮಾರ್ಗ ನೀಡಲಾಗಿದೆ. ಅದೇ ರೀತಿ ಭೂ ಸುರಕ್ಷಾ ಮೋಜನಿಗೆ ಈಗ ಕಾನೂನಿನ ಬಲ ಒದಗಿಸಲಾಗಿದ್ದು, ನಿಯಮಗಳಲ್ಲಿ ಅವಕಾಶ ನೀಡಲಾಗಿದೆ.
Final notification on December 23 for amendment of Karnataka Land Revenue Act 1964: Many important changes! ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ : ಹಲವು ಮಹತ್ವದ ಬದಲಾವಣೆ!
| In the last 2 years, various sections of the Land Revenue Act, 1964 have been amended to provide a progressive and public-friendly administration in the state of Karnataka. Nine amendments have been made to 47 sections.
