Bengaluru | Good news for residents of Thanda – Hatti - Gollarahatti : Title deeds for 1.10 lakh families in February - a significant step by the Revenue Department! ಬೆಂಗಳೂರು | ತಾಂಡ –ಹಟ್ಟಿ - ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ

bengaluru news | ಬೆಂಗಳೂರು | ತಾಂಡ, ಹಟ್ಟಿ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!

ಬೆಂಗಳೂರು (bangalore), ಡಿಸೆಂಬರ್ 26: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಅಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆ ಮಾಡಲು 2017 ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳಿಗೆ ನೆಮ್ಮದಿ ನೀಡಲು ಅವರ ವಾಸಕ್ಕೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ ಎಂದು ಕಂದಾಯ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಕಾನೂನು 2017 ರಲ್ಲಿ ತಿದ್ದುಪಡಿ ಆದ ನಂತರ, 2023 ಮೇವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ  ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025 ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ಈಗಾಗಲೇ ನೀಡಲಾಗಿದೆ. ಮೇ 2025 ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲಾ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಫೆಬ್ರವರಿ ತಿಂಗಳಲ್ಲಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ.

ಕಾಲಾನುಕಾಲದಿಂದ ಬಹುತೇಕ ಬಡ ಕುಟುಂಬಗಳು ವಾಸಿಸುತ್ತಿದ್ದರೂ ದಾಖಲೆ ರಹಿತವಾಗಿರುವುದರಿಂದ ಅವರ ಬದುಕೇ ಅತಂತ್ರವಾಗಿದೆ. ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕೆಲಸ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ನಡೆಯುತ್ತಿದೆ.

ದಾಖಲೆ ರಹಿತ ವಸತಿ ಪ್ರದೇಶ ಮತ್ತು ಮನೆಗಳನ್ನು ಗುರುತಿಸಿ ಸರ್ವೇ ಮಾಡಿ, ದಾಖಲೆಗಳನ್ನು ತಯಾರಿಸಿ, ಅಧಿಸೂಚನೆ ಹೊರಡಿಸಿ, ಹಕ್ಕುಪತ್ರ ನೀಡಿ, ಕ್ರಯಪತ್ರದಂತೆ ನೋಂದಣಿ ಮಾಡಿ ಸ್ಥಳೀಯ ಸಂಸ್ಥೆಯಲ್ಲಿ ಪಕ್ಕಾ ಖಾತೆ ಮಾಡುವುದರ ಮುಖಾಂತರ ಸಂಪೂರ್ಣ ಮಾಲಿಕತ್ವದ ಗ್ಯಾರಂಟಿ ನೀಡುವ ಈ ಕಾರ್ಯ ರಾಜ್ಯಾದ್ಯಂತ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದೆ.

ಬಹುತೇಕ ಬಡ ಕುಟುಂಬಗಳೇ ಇದರ ಫಲಾನುಭವಿಗಳಾಗಿದ್ದಾರೆ. ಯಾರಿಂದಲೂ ಅರ್ಜಿಗೆ ಕಾಯದೆ, ಕಂದಾಯ ಇಲಾಖೆಯ ಅಧಿಕಾರಿಗಳೇ ಸ್ವತಃ ಜನರ ಮನೆ ಬಾಗಿಲಿಗೆ ಹೋಗಿ ಇಷ್ಟೂ ಕೆಲಸವನ್ನು ಮಾಡಿಕೊಡುತ್ತಿದ್ದಾರೆ. ಇದರಲ್ಲಿ ಆಗಿರುವ ಪ್ರಗತಿಯನ್ನುಒಳಗೊಂಡರೆ ಒಟ್ಟು 4 ಲಕ್ಷ ಕುಟುಂಬಗಳಿಗೆ  ಶಾಶ್ವತ ನೆಮ್ಮದಿ ನೀಡಿದಂತಾಗುತ್ತದೆ ಎಂದು ಕಂದಾಯ ಇಲಾಖೆ ಪ್ರಕಟಣೆ ತಿಳಿಸಿದೆ.

shimoga APMC vegetable prices | Details of vegetable prices for December 26 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
Shivamogga: Houses damaged due to cylinder explosion – MLA visits ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ Next post shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ