Shivamogga: New Year's Eve - Police Department issues warning! ಶಿವಮೊಗ್ಗ : ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್!

shimoga | new year 2026 | ಶಿವಮೊಗ್ಗ : ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್!

ಶಿವಮೊಗ್ಗ (shivamogga), ಡಿಸೆಂಬರ್ 29: ಹೊಸ ವರ್ಷ– 2026 ರ ಸಂಭ್ರಮಾಚರಣೆ ವೇಳೆ, ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವಂತೆ ಕಾರ್ಯಕ್ರಮ ಆಯೋಜಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸೂಚಿಸಿದ್ದಾರೆ.

ಡಿಸೆಂಬರ್ 29 ರಂದು ನಗರದ ಡಿಎಆರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹೋಟೆಲ್, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ ಹಾಗೂ ಹೊಸ ವರ್ಷಾಚರಣೆ ಕಾರ್ಯಕ್ರಮ ಆಯೋಜಕರಿಗೆ ಸಭೆಯಲ್ಲಿ ಅವರು ಮಾತನಾಡಿದರು.

ಸೂಚನೆಗಳೇನು? : ಸಂಭ್ರಮಾಚರಣೆಗೆ ಆಗಮಿಸುವವರ ಸುರಕ್ಷತೆಗೆ ಎಚ್ಚರವಹಿಸಬೇಕು. ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುವ ಸಾದ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದವರು ಕುಡಿದು ವಾಹನ ಚಾಲನೆ ಮಾಡದಂತೆ ಸಲಹೆ ನೀಡಬೇಕು. ಅಗತ್ಯ ಸಂದರ್ಭಗಳಲ್ಲಿ 112 ತುರ್ತು ಸಹಾಯವಾಣಿಗೆ ಕರೆ ಮಾಡುವಂತೆ ಸೂಚಿಸಿದ್ದಾರೆ.

ಸಮಾರಂಭಕ್ಕೆ ಹಾಜರಾಗುವವರ ವಿವರಗಳನ್ನು ಮುಂಚಿತವಾಗಿಯೇ ಸಂಗ್ರಹಿಸಬೇಕು. ಮುಂಜಾಗೃತ ಕ್ರಮಗಳ ಮಾಹಿತಿಯನ್ನು ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ನೀಡಬೇಕು. ಮಿತಿಮೀರಿದ ಸಂಖ್ಯೆಯಲ್ಲಿ ಜನರಿಗೆ ಅವಕಾಶ ಕಲ್ಪಿಸಬಾರದು.

ಮಹಿಳೆಯರು ಹಾಗೂ ಮಕ್ಕಳ ಸುರಕ್ಷೆತೆಗೆ ಆದ್ಯತೆ ನೀಡಬೇಕು. ಪ್ರತಿಯೋರ್ವರ ಐಡಿ ಪ್ರೂಫ್ ಗಳನ್ನು ಪಡೆದುಕೊಳ್ಳಬೇಕು. ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು. ಮಾದಕ ವಸ್ತುಗಳ ಉಪಯೋಗಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು.

ಮಾದಕ ವಸ್ತುಗಳ ಬಳಕೆ ಕಂಡು ಬಂದಲ್ಲಿ ಅಂತಹವರ ವಿರುದ್ಧ NDPS ಕಾಯ್ದೆ ರೀತ್ಯಾ ಕ್ರಮ ಜರುಗಿಸಲಾಗುವುದು. ಪಟಾಕಿಗಳನ್ನು ಬಳಕೆ ಮಾಡುವಾಗ ಎಲ್ಲಾ ರೀತಿಯ ಸುರಕ್ಷಿತ ಕ್ರಮ ಅನುಸರಿಸಬೇಕು. ಸೂಕ್ತ ರೀತಿಯ ಬೆಳಕಿನ ವ್ಯವಸ್ಥೆ ಮಾಡಬೇಕು.

ಸಂಚಾರ ವ್ಯವಸ್ಥೆಗೆ ಯಾವುದೇ ದಕ್ಕೆಯಾಗದ ರೀತಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಡಿಸೆಂಬರ್ 31 ರ ರಾತ್ರಿ 12 ಗಂಟೆಗೆ ಶುರು ಮಾಡುವ ಸಂಭ್ರಮಾಚರಣೆಯನ್ನು 1 ಗಂಟೆಯ ವೇಳೆಗೆ ಪೂರ್ಣಗೊಳಿಸಬೇಕು.

ಈಜು ಕೊಳಗಳು ಇದ್ದಲ್ಲಿ ಹೆಚ್ಚಿನ ಜಾಗರೂಕತೆವಹಿಸಬೇಕು. ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನ ಪಾಲಿಸಬೇಕು. ಫೈರ್ ಕ್ಯಾಂಪ್ ನಡೆಯುವಾಗ ಯಾವುದೇ ಅಗ್ನಿ ಅವಘಡವಾಗದ ರೀತಿ ಕ್ರಮ ಕೈಗೊಳ್ಳುವಂತೆ ಎಸ್ಪಿ ಸೂಚನೆ ನೀಡಿದ್ದಾರೆ.

Shivamogga, December 29: District Superintendent of Police G K Mithun Kumar has instructed the event organizers to strictly follow the rules during the celebration of New Year 2026. He was speaking at a meeting organized for hotel, lodge, resort, homestay and New Year event organizers at the city’s DAR auditorium on December 29.

Shivamogga: A young man was murdered near the APMC vegetable market! ಶಿವಮೊಗ್ಗ : ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪ ಯುವಕನ ಕೊಲೆ! Previous post shimoga BREAKING NEWS | ಶಿವಮೊಗ್ಗ : ತರಕಾರಿ ಮಾರುಕಟ್ಟೆ ಸಮೀಪ ಯುವಕನ ಕೊಲೆ!