ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ : ಕಾಂಗ್ರೆಸ್ ನಾಯಕರಿಗೆ ನೀಡಿದ ಸೂಚನೆಯೇನು?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಿದರು. ನಂತರ ಹೆಲಿಕ್ಯಾಪ್ಟರ್ ನಲ್ಲಿ ಉಡುಪಿ ಜಿಲ್ಲೆಗೆ ಪ್ರಯಾಣ ಬೆಳೆಸಿದರು.

ಶಿವಮೊಗ್ಗ, ಏ. 27: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಿದರು. ನಂತರ ಹೆಲಿಕ್ಯಾಪ್ಟರ್ ನಲ್ಲಿ ಉಡುಪಿ ಜಿಲ್ಲೆಗೆ ಪ್ರಯಾಣ ಬೆಳೆಸಿದರು.

ಚರ್ಚೆ: ರಾಹುಲ್ ಗಾಂಧಿ ಅವರು ವಿಧಾನಸಭಾ ಚುನಾವಣಾ ಕಣಕ್ಕಿಳಿದ ಅಭ್ಯರ್ಥಿಗಳ ಜೊತೆ ಸಮಾಲೋಚಿಸಿದ್ದಾರೆ. ಜೊತೆಗೆ ಪಕ್ಷದ ವಿವಿಧ ವಿಭಾಗಗಳ ಮುಖಂಡರ ಜೊತೆ ಸಂವಾದ ನಡೆಸಿದ್ದಾರೆ.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳ ಅಭ್ಯರ್ಥಿಗಳು ಜಯ ಸಾಧಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುವಂತೆ ರಾಹುಲ್ ಗಾಂಧಿ ಅವರು ಸಲಹೆ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *