bhadra dam news | ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು : ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ!

Water from Bhadra Reservoir to Tungabhadra River: Public advised to be cautious! ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು : ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ!

ಶಿವಮೊಗ್ಗ (shivamogga), ಜನವರಿ 20: 2025-26 ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಈ ಕುರಿತಂತೆ ಜನವರಿ 20 ರಂದು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಜನವರಿ 20 ರಿಂದ ಜ. 30 ರವರೆಗೆ ಪ್ರತಿ ದಿನ 500 ಕ್ಯೂಸೆಕ್ ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು

ಈ ವೇಳೆ ನದಿಯಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ಕೂಡ ನಿರ್ಬಂಧಿಸಲಾಗಿದೆ ಎಂದು ಎಂದು ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

Water from Bhadra Reservoir to Tungabhadra River: Public advised to be cautious!

Shivamogga, January 20: In the year 2025-26, on the occasion of the annual carnival of Sri Mailaralingeshwara Swamy at Mailar village in Huvinahadagali taluk of Vijayanagara district, water is being released from the Bhadra Reservoir into the Tungabhadra River. From January 20 to January 30, 500 cusecs of water will be released daily, and on January 31, 300 cusecs will be released — totaling 0.50 TMC of water. During this period, the public is prohibited from wandering in the river, grazing cattle, and engaging in horticultural activities. The public and farmers are also restricted from installing pump sets on the riverbanks and from illegally drawing water, according to a notification issued by the Executive Engineer of the Bhadra Project Division, Karnataka Irrigation Corporation.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →