shimoga news | ಶಿವಮೊಗ್ಗ : ಸ್ನೇಹಿತರ ನಡುವೆ ಜಗಳ – ಎಸ್ಎಸ್ಎಲ್’ಸಿ ವಿದ್ಯಾರ್ಥಿ ಕೊಲೆಯಲ್ಲಿ ಅಂತ್ಯ!

Shivamogga: Quarrel Among Friends Ends in SSLC Student’s Murder! ಶಿವಮೊಗ್ಗ : ಸ್ನೇಹಿತರ ನಡುವೆ ಜಗಳ - ಎಸ್ಎಸ್ಎಲ್’ಸಿ ವಿದ್ಯಾರ್ಥಿ ಕೊಲೆಯಲ್ಲಿ ಅಂತ್ಯ!

ಶಿವಮೊಗ್ಗ, ಫೆಬ್ರವರಿ 24: ಸ್ನೇಹಿತರ ನಡುವೆ ನಡೆದ ಗಲಾಟೆಯಲ್ಲಿ ಎಸ್ಎಸ್ಎಲ್’ಸಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಕೊಲೆಯಾಗಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದಲ್ಲಿ ನಡೆದಿದೆ.

16 ವರ್ಷದ ಬಾಲಕನೇ ಕೊಲೆಗೀಡಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಸ್ಎಸ್ಎಲ್’ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಶಾಲೆಯಲ್ಲಿ ವಿಶೇಷ ತರಗತಿಗಳು ನಡೆಯುತ್ತಿದ್ದು, ಅದರಂತೆ ವಿದ್ಯಾರ್ಥಿಯು ಫೆಬ್ರವರಿ 23 ರ ಸಂಜೆ ತರಗತಿ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ.

ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ನಡುವೆ ಗಲಾಟೆಯಾಗಿದೆ. ಗಲಾಟೆ ಬಿಡಿಸಲು ಹೋದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಆತನನ್ನು, ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ನಿಖಿಲ್ ಬಿ ಅವರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕನ ಕುಟುಂಬ ಸದಸ್ಯರ ಶೋಕ ಮುಗಿಲುಮುಟ್ಟಿದೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga: Quarrel Among Friends Ends in SSLC Student’s Murder!

Shivamogga, February 24: A tragic incident has taken place on the outskirts of Shivamogga city, where a quarrel among friends led to the death of a student preparing for his SSLC exams. The victim has been identified as a 16‑year‑old boy. With SSLC examinations approaching, special classes were being held at the school. On February 23 evening, the student had finished his class and was returning home. At that time, a minor quarrel broke out among classmates. When the student tried to intervene and resolve the fight, he was attacked. Severely injured, he collapsed and, while being rushed to the hospital, died on the way, according to reports.

 

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *