ಸೊರಬ : ಕಾರು – ಬೈಕ್ ನಡುವೆ ಅಪಘಾತ ; ಸಹೋದರರಿಬ್ಬರ ದಾರುಣ ಸಾವು!

ಸೊರಬ - ಕಾರು ಡಿಕ್ಕಿ : ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ದಾರುಣ ಸಾವು!

ಸೊರಬ, ಮೇ 3: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಹಾಗೂ ಹಿಂಬದಿ ಸವಾರ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಸಮೀಪ ಬುಧವಾರ ನಡೆದಿದೆ. ಮೃತರಿಬ್ಬರು ಸಹೋದರರಾಗಿದ್ದಾರೆ.

ಸಾಗರದ ರಾಮನಗರದ ನಿವಾಸಿಗಳಾದ ವೆಲ್ಡಿಂಗ್ ಕೆಲಸ ಮಾಡುವ ಸುಹೇಲ್ (27) ಹಾಗೂ ಅಫ್ರೀದ್ (21) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಫ್ರೀದ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಹೇಲ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ.

ಉಳವಿಯಲ್ಲಿ ಆಯೋಜಿತವಾಗಿದ್ದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸೊರಬ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಅವಘಡದ ಕುರಿತಂತೆ ಇನ್ನಷ್ಟೆ ಹೆಚ್ಚಿನ ಇವರಗಳು ಲಭ್ಯವಾಗಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *