ಶಿವಮೊಗ್ಗ (shivanogga), ಮಾರ್ಚ್ 20: ಹಣದಾಸೆಗೆ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿಯ ಕೆಲ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ ಐ ಆರ್ ದಾಖಲಿಸಿ ವಿಚಾರಣೆ ಕೈಗೊಳ್ಳಲಾಗಿದೆ. ಸಾರ್ವಜನಿಕರು ಇಂತಹ ವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಈ ಕುರಿತಂತೆ ಮಾರ್ಚ್ 20 ರಂದು ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ ಖಾಸಗಿ ವ್ಯಕ್ತಿಗಳಿಂದ ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು, ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರು ಜನ ಆರೋಪಿಗಳ ವಿರುದ್ದ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ವಿಚಾರಣೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಾರ್ಚ್ 18 ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕರು ಹಳೆಯ ಮಂಜೂರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿ ಗಮನಿಸಿದ್ದಾರೆ. ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ನಕಲಿ ದಾಖಲೆ ಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿತ್ತು.
ಸಾಗರ ತಹಶಿಲ್ದಾರ್ ಕಚೇರಿಯಲ್ಲಿ ಈ ಕಾರ್ಯವೆಸಗುತ್ತಿದ್ದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗೆ ಯಾವುದೇ ಸರ್ಕಾರಿ ದಾಖಲೆಗಳನ್ನು ನಕಲು ಮಾಡಿ, ಜಮೀನು ಮಂಜೂರು ಮಾಡಲು ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಡಿಸಿ ಅವರು ಮನವಿ ಮಾಡಿದ್ದಾರೆ.
Illegal dealings by Sagar Tahsildar office staff for money: FIR registered – DC’s warning
Shivamogga, March 20: An FIR has already been registered and investigation initiated against some staff members of the Sagar Tahsildar office, who were allegedly forging government records to grant land to private individuals in exchange for money. District Commissioner Prabhuling Kavali Katti has cautioned the public to remain alert about such matters.
He issued a press release on March 20 stating that Sagar Tahsildar Rashmi Halesh had exposed a network in which office staff were collecting money from private individuals and creating fake government documents to sanction land. Six accused have been booked at the Sagar Town Police Station, and inquiry has begun.
On Wednesday, March 18, the Tahsildar personally noticed that the record room supervisor was tampering with old sanction letters. Fake documents were being created to grant government land to private individuals.
Legal action is being taken against those involved in these activities at the Sagar Tahsildar office. The DC has emphasized that no government records can be forged to grant land, and urged the public to remain vigilant.

