SSLC Result | ಏಪ್ರಿಲ್ 23 ರಂದೇ ಪ್ರಕಟವಾಗಲಿದೆ SSLC ರಿಸಲ್ಟ್!

SSLC Result to be declared on April 23!ಏಪ್ರಿಲ್ 23 ರಂದೇ ಪ್ರಕಟವಾಗಲಿದೆ ಎಸ್ ಎಸ್ ಎಲ್ ಸಿ ರಿಸಲ್ಟ್!

ಬೆಂಗಳೂರು (bengaluru), ಏಪ್ರಿಲ್ 22: ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಏಪ್ರಿಲ್ 23 ರ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಯ ವೆಬ್‌ಸೈಟ್‌ https://karresults.nic.in/ ಮತ್ತು ಕರ್ನಾಟಕ ಒನ್‌ ಆ್ಯಪ್‌ ಮೂಲಕ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದೆ.

ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್‌ ಆ್ಯಪ್‌ / ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಪ್ರಸ್ತುತ ವರ್ಷ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಏಪ್ರಿಲ್‌ 23ರಂದು ಮಧ್ಯಾಹ್ನ 12 ಗಂಟೆಗೆ https://www.digilocker.gov.in/ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

ಸಚಿವರು ಹೇಳಿದ್ದೇನು? : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಕುರಿತಂತೆ  ಶಿಕ್ಷಣ ಸಚಿವ ಮಧು ಬಂಗಾರಪ್ಪರವರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಏಪ್ರಿಲ್ 23 ಮಧ್ಯಾಹ್ನ 12 ಗಂಟೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸಲಾಗುವುದು. ಫಲಿತಾಂಶ ಪ್ರಕಟಿಸುವಾಗ ಸದರಿ ವಿಚಾರಗಳ ಕುರಿತಂತೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *