shimoga railway news | ಬೇಸಿಗೆ ರಜೆ : ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

SWR to run special trains between Yesvantpur–Talguppa for Summer special shimoga railway news | ಬೇಸಿಗೆ ರಜೆ : ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ
ಶಿವಮೊಗ್ಗ (shivamogga), ಏಪ್ರಿಲ್ 30: ಬೇಸಿಗೆಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಮೇ 01 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಮೇ. 02) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್  ಮೇ 2 (ಶನಿವಾರ) ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ.
ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ ಎಂದು ಪ್ರಕಟಣೆಯಲ್ಲಿ ರೈಲ್ವೆ ಇಲಾಖೆ ತಿಳಿಸಿದೆ.
SWR to run special trains between Yesvantpur–Talguppa for Summer special
South Western Railway will operate special trains between Yesvantpur, Talguppa to clear the extra rush of passengers in view of Summer special.
Train No. 06587 Yesvantpur–Talguppa Express Special will depart from Yesvantpur at 22:45 hrs on 01.05.2026 (Friday) and arrive at Talguppa at 05:05 hrs on 02.05.2026 (Saturday).
In the return direction, Train No. 06588 Talguppa–Yesvantpur Express Special will depart from Talguppa at 09:30 hrs on 02.05.2026 (Saturday) and arrive at Yesvantpur at 17:15 hrs on the same day.
En route, the special train will have stoppages at Tumakuru, Tiptur, Arsikere, Birur Jn, Tarikere, Bhadravati, Shivamogga Town, Konagavalli Halt, Harnahalli Halt, Kumsi, Arasalu Halt, Kenchanalu Halt, Anandapuram, Adderi Halt and Sagara Jambagaru stations in both directions.
The special train will consist of 20 coaches comprising 1 First Class cum AC 2-Tier, 2 AC Three Tier, 10 Sleeper Class, 5 General Second Class and 2 SLR/D coaches.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *