ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

ಶಿವಮೊಗ್ಗ, ಮೇ 7: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

‘ಕಾಂಗ್ರೆಸ್ ಪಕ್ಷ ಹಾರಿ ಬಿಡುತ್ತಿರುವ ಸುಳ್ಳು ಭರವಸೆಯ ಬಲೂನ್ ಗಳನ್ನು ಕರ್ನಾಟಕದ ಜನತೆ ಚೂರುಚೂರು ಮಾಡಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಭಯ ಶುರುವಾಗಿದೆ. ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದವರನ್ನು ಮತ್ತೆ ಕರೆತಂದು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರದ ಕುರಿತಂತೆ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದಲ್ಲಿ ಎಲ್ಲಿಯೇ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಮತ್ತೊಮ್ಮೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಳಿಗ್ಗೆ ತಾವು ಬೆಂಗಳೂರಿನಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಯಿತು. ನೀಟ್ ಪರೀಕ್ಷೆಯಿದ್ದ ಕಾರಣ ಬೆಳಿಗ್ಗೆಯೇ ರೋಡ್ ಶೋ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಎಚ್ಚರವಹಿಸಲಾಯಿತು ಎಂದು ಇದೇ ವೇಳೆ ನರೇಂದ್ರ ಮೋದಿ ಅವರು ಹೇಳಿದರು.  

ಸಮಾರಂಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಬಮುಖಂಡರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *